Breaking News

ಬಿಹಾರದಲ್ಲಿ ನಿತೀಶ್ ಮತ್ತೆ ಸಿಎಂ ಆಗೋದು ಫಿಕ್ಸ್ ?

Spread the love

ಪಾಟ್ನಾ, ನ.10- ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಜೆಡಿಯು ಕಡಿಮೆ ಸ್ಥಾನಗಳಲ್ಲು ಗಳಿಸಿದ್ದರೂ ಕೂಡ ಬಿಜೆಪಿ ಬೆಂಬಲ ಪಡೆದು ಆರನೇ ಅವಧಿಗೆ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಮಧ್ಯಾಹ್ನದ ವರೆಗಿನ ಫಲಿತಾಂಶದಲ್ಲಿ ಜೆಡಿಯು ಮತ್ತು ಬಿಜೆಪಿ ಮಿತ್ರಕೂಟವಾಗಿರುವ ಎನ್‍ಡಿಎ 131 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿ ಸರ್ಕಾರಕ್ಕೆ ಅಗತ್ಯವಾದ ಬಹುಮತ ಪಡೆಯುವ ನಿಟ್ಟಿನಲ್ಲಿ ಹೆಜ್ಜೆ ಹಾಕಿತ್ತು.

ಈ ಸಂದರ್ಭದಲ್ಲಿ ಬಿಜೆಪಿ 24 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದರೆ ಜೆಡಿಯು 47 ಸ್ಥಾನಗಳಲ್ಲಿ ಮುನ್ನಡೆ ಇತ್ತು. ಜೆಡಿಯುಗಿಂತ ಬಿಜೆಪಿ ಹೆಚ್ಚು ಸ್ಥಾನಗಳನ್ನು ಪಡೆಯುವ ನಿರೀಕ್ಷೆಗಳು ವ್ಯಕ್ತವಾಗಿದ್ದವು. ಆಡಳಿತ ವಿರೋಧಿ ಅಲೆ, ಭ್ರಷ್ಟಾಚಾರದ ಆರೋಪ ಸೇರಿದಂತೆ ಹಲವಾರು ಕಾರಣಗಳಿಂದಾಗಿ ಕಳೆದ ಚುನಾವಣೆಯಲ್ಲಿ ಕೇಳಿ ಬಂದಿದ್ದ ನಿತೀಶ್ ಬ್ರಾಂಡ್ ಈ ಬಾರಿ ಮಂಕಾಗಿತ್ತು. ಅದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ವರ್ಚಸ್ಸು ಬೆಂಗಾವಲಾಗಿ ನಿಂತಿದ್ದು, ಎನ್‍ಡಿಎಯನ್ನು ಮತ್ತೆ ಅಧಿಕಾರಕ್ಕೆ ಹತ್ತಿರ ಮಾಡಿದೆ.


Spread the love

About Laxminews 24x7

Check Also

ಬ್ರಹ್ಮಕುಮಾರಿಸ್ ಜಾಗತಿಕ ಶೃಂಗ ಸಭೆಯಲ್ಲಿ ಖಾನಾಪೂರ ಶಾಸಕ ವಿಠ್ಠಲ ಹಲಗೇಕರ ಅವರು ಭಾಗಿ

Spread the love ಬ್ರಹ್ಮಕುಮಾರಿಸ್ ಜಾಗತಿಕ ಶೃಂಗ ಸಭೆಯಲ್ಲಿ ಖಾನಾಪೂರ ಶಾಸಕ ವಿಠ್ಠಲ ಹಲಗೇಕರ ಅವರು ಭಾಗಿ  -ಖಾನಾಪೂರದ ಶಾಸಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ