Breaking News

ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ನಾಮಕರಣ ಮಾಡುವ ನಿರ್ಣಯ ಅಂಗೀಕಾರ

Spread the love

ಬೆಳಗಾವಿ : ವಿಧಾನಸಭೆಯಲ್ಲಿ ರಾಜ್ಯದ ನಾಲ್ಕು ಏರ್​ಪೋರ್ಟ್​ಗಳಿಗೆ ನಾಮಕರಣ ಮಾಡುವ ನಿರ್ಣಯ ಅಂಗೀಕಾರ ಪಡೆದುಕೊಳ್ಳಲಾಯಿತು.
ಈ ಸಂಬಂಧ ಮೂಲ ಸೌಕರ್ಯ ಅಭಿವೃದ್ಧಿ ಇಲಾಖೆ ಸಚಿವ ಎಂ.ಬಿ ಪಾಟೀಲ್, ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವ ನಿರ್ಣಯ ಮಂಡಿಸಿದರು.

 

ವಿಜಯಪುರ ವಿಮಾನ ನಿಲ್ದಾಣಕ್ಕೆ ಜಗಜ್ಯೋತಿ ಬಸವೇಶ್ವರ ಹೆಸರು, ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಹೆಸರು, ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ, ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹೆಸರಿಡುವ ನಿರ್ಣಯವನ್ನು ಅಂಗೀಕರಿಸಲಾಯಿತು. ಇತ್ತ ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರು ಇಡಿ ಎಂದು ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಆಗ್ರಹಿಸಿದರು. ಅಬ್ಬಯ್ಯ ಒತ್ತಾಯಕ್ಕೆ ಬಿಜೆಪಿ ಸದಸ್ಯರಿಂದ ತೀವ್ರ ಆಕ್ಷೇಪ ವ್ಯಕ್ತವಾಯಿತು. ಈ ವೇಳೆ ಸದನದಲ್ಲಿ ಗದ್ದಲ ಕೋಲಾಹಲ ಏರ್ಪಟ್ಟಿತು.

ನೆಹರೂ ಭಾವಚಿತ್ರ ಹಾಕಲು ಆಗ್ರಹ : ವಿಧಾನಸಭೆ ಸಭಾಂಗಣದಲ್ಲಿ ನೆಹರೂ ಭಾವಚಿತ್ರ ಹಾಕುವಂತೆ ಕಾಂಗ್ರೆಸ್ ಶಾಸಕ ಡಾ.ರಂಗನಾಥ್ ಒತ್ತಾಯಿಸಿದರು. ನೆಹರೂ ಭಾವಚಿತ್ರ ವಿಚಾರದಲ್ಲಿ ಬಹಳಷ್ಟು ಶಾಸಕರು ನಿಮಗೆ ಮನವಿ ಮಾಡಿದ್ದಾರೆ. ಸದನದಲ್ಲಿ ನೆಹರೂ ಅವರ ಭಾವಚಿತ್ರ ತರಬೇಕಾಗಿ ಕೇಳಿಕೊಳ್ತೇನೆ ಎಂದು ಮನವಿ ಮಾಡಿದರು. ಇದಕ್ಕೆ ಉತ್ತರಿಸಿದ ಸ್ಪೀಕರ್, ಸದನದಲ್ಲಿ ಯಾವ್ಯಾವ ಸಂದರ್ಭದಲ್ಲಿ ಏನೇನು ಮಾಡಬೇಕು ಅಂತ ಬಿಎಸಿ ಸಭೆ ನಿರ್ಧರಿಸುತ್ತದೆ. ಏನೇ ಇದ್ದರೂ ನೀವು ಸಿಎಂ ಅವರಿಗೆ ತಿಳಿಸಿ. ಸಿಎಂ ಬಿಎಸಿ ಸಭೆಯಲ್ಲಿ ಚರ್ಚೆ ಮಾಡ್ತಾರೆ ಎಂದರು.


Spread the love

About Laxminews 24x7

Check Also

ಬೆಳಗಾವಿ ಪ್ರತಿ ವರ್ಷದಂತೆ ಈ ವರ್ಷವೂ 98ನೇ ನಾಡ ಹಬ್ಬ ಉತ್ಸವವನ್ನು ಸೆ.22ರಿಂದ ಸೆ.26ರವರೆಗೆ ನಗರದ ಕನ್ನಡ ಸಾಹಿತ್ಯ ‌ಭವನದಲ್ಲಿ ಆಯೋಜಿಸಲಾಗಿದೆ

Spread the loveಬೆಳಗಾವಿ ಪ್ರತಿ ವರ್ಷದಂತೆ ಈ ವರ್ಷವೂ 98ನೇ ನಾಡ ಹಬ್ಬ ಉತ್ಸವವನ್ನು ಸೆ.22ರಿಂದ ಸೆ.26ರವರೆಗೆ ನಗರದ ಕನ್ನಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ