ದಾವಣಗೆರೆ, ಡಿಸೆಂಬರ್ 14: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಮಾಜಿ ಸಚಿವ ವಿ. ಸೋಮಣ್ಣ ಅವರ ಪಾಪದ ಕೊಡ ತುಂಬಿದೆ. ಅವರು ನಾಶ ಆಗುತ್ತಾರೆ. ಇದೇ ಕಾರಣಕ್ಕೆ ಇಬ್ಬರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಮಾತಾಡುತ್ತಿದ್ದಾರೆ ಎಂದು ಮಾಜಿ ಸಚಿವ ಎಂಪಿ ರೇಣುಕಾಚಾರ್ಯ(MP Renukacharya)ವಾಗ್ದಾಳಿ ಮಾಡಿದ್ದಾರೆ. ನಗದರಲ್ಲಿ ಮಾತನಾಡಿದ ಅವರು, ಇವರಿಬ್ಬರಿಗೂ ಯಡಿಯೂರಪ್ಪ ಮತ್ತು ವಿಜಯೇಂದ್ರ ವಿರುದ್ದ ಮಾತನಾಡುವುದು ಬಿಟ್ಟು ಬೇರೆ ಕೆಲಸವಿಲ್ಲ ಎಂದು ಕಿಡಿಕಾರಿದ್ದಾರೆ.
ಯತ್ನಾಳ್ ಮತ್ತು ಸೋಮಣ್ಣ ಎಚ್ಚರ ನಾನು ಸುಮ್ಮನಿರಲ್ಲ. ಎಲ್ಲಿಯವರೆಗೆ ಯಡಿಯೂರಪ್ಪ, ವಿಜಯೇಂದ್ರ ವಿರುದ್ದ ಮಾತಾಡುತ್ತೀರಿ ಅಲ್ಲಿಯವರೆಗೆ ನಾನು ಮಾತನಾಡುವೆ ಎಂದು ಎಚ್ಚರಿಕೆ ನೀಡಿದ್ದಾರೆ.
ವಿ ಸೋಮಣ್ಣ ಮಹಾ ಸುಳ್ಳುಗಾರ
ಬರುವ ಲೋಕಸಭೆ ಚುನಾವಣೆಯಲ್ಲಿ ವಿಜಯೇಂದ್ರ ನೇತ್ರತ್ವದಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನ ಗೆಲ್ಲಬಾರದು ಎಂದು ರೀತಿ ಮಾಡುತ್ತಿರಬಹುದು. ವಿ ಸೋಮಣ್ಣ ಮಹಾ ಸುಳ್ಳುಗಾರ. ಸುಳ್ಳನ್ನ ಸತ್ಯ ಮಾಡುವ ಕಲೆ ಇವರಿಗೆ ಮಾತ್ರ ಗೊತ್ತು. ಸಿದ್ದರಾಮಯ್ಯ ವಿರುದ್ದ ಸ್ಪರ್ಧೆ ಮಾಡಿ ಗೆದ್ದು ಸಿಎಂ ಆಗಬೇಕೇಂಬ ಉತ್ಸಾಹದಲ್ಲಿದ್ದರು ಸೋಮಣ್ಣ. ಜನರು ಯಡಿಯೂರಪ್ಪ ಮುಖ ನೋಡಿ ಮತ ಹಾಕಿದ್ದಾರೆ ಹೊರತು, ಸೋಮಣ್ಣರನ್ನು ನೋಡಿ ಯಾರು ಮತ ಹಾಕಿಹಾಕಿಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.