Breaking News

ಬೆಳಗಾವಿ ಸುವರ್ಣ ವಿಧಾನಸೌಧವನ್ನು ಪ್ರವಾಸಿ ತಾಣವನ್ನಾಗಿ ಮಾಡಲು ಸರ್ಕಾರ ಚಿಂತನೆ

Spread the love

ಬೆಳಗಾವಿ : ಬೆಳಗಾವಿ ಸುವರ್ಣ ವಿಧಾನಸೌಧವನ್ನು ಪ್ರವಾಸಿ ತಾಣವನ್ನಾಗಿ ಮಾಡಲು ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ಡಿಸಿಎಂ ಡಿ ಕೆ ಶಿವಕುಮಾರ್‌ ಮಾಹಿತಿ ನೀಡಿದ್ದಾರೆ.

ರಾಜ್ಯಕ್ಕೆ ಕರ್ನಾಟಕ ಎಂದು ಮರು ನಾಮಕರಣಗೊಂಡು 50 ವರ್ಷ ತುಂಬಿದ ಹಿನ್ನೆಲೆ ಸುವರ್ಣ ಸೌಧ ಆವರಣದಲ್ಲಿ ನಡೆದ ಸುವರ್ಣ ಸಂಭ್ರಮ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಕೆಶಿ, ವಾರಾಂತ್ಯದಲ್ಲಿ ಸುವರ್ಣ ಸೌಧವನ್ನು ಸಾರ್ವಜನಿಕರಿಗೆ ಮುಕ್ತವಾಗಿ ತೆರೆದು ಪ್ರವಾಸಿ ತಾಣವನ್ನಾಗಿ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಿದ್ದಾರೆ.

ಸುವರ್ಣ ಸವಧದ ಪ್ರಮುಖ ಸ್ಥಳಗಳಲ್ಲಿ ಫೋಟೊಶೂಟ್‌ ಸ್ಥಳಗಳನ್ನು ನಿರ್ಮಾಣ ಮಾಡಿ ಪ್ರವಾಸಿಗರಿಗೆ ಆಕರ್ಷಣೀಕ ತಾಣವನ್ನಾಗಿ ಮಾಡಲಾಗುವುದು ಈ ಬಗ್ಗೆ ವಿಧಾನಸಭೆ ಹಾಗೂ ಪರಿಷತ್‌ ಸಭಾಪತಿ , ಮಾಜಿ ಸಭಾಪತಿಗಳು ಸಲಹೆಗಳನ್ನು ನೀಡಿದ್ದಾರೆ, ಮಾಜಿ ಸ್ಪೀಕರ್‌ ಕೆ ಬಿ ಕೋಳಿವಾಡ್‌ ಅವರು ಕೂಡ ಪ್ರವಾಸಿ ತಾಣ ಮಾಡುವ ಸಲಹೆಗಳನ್ನು ನೀಡಿದ್ದಾರೆ ಎಂದರು.

ಸರ್ಕಾರ ಸಭೆ, ಪ್ರಾದೇಶಿಕ ಕೂಟಗಳು ಇಲ್ಲದ ಸಮಯದಲ್ಲಿ ವಿದೇಶಿ ನಿಯೋಗಗಳೊಂದಿಗೆ ಸಮ್ಮೇಳನ ಆಯೋಜಿಸುವಂತಹ ಹೆಚ್ಚುವರಿ ಬಳಕೆಯನ್ನು ಕೂಡ ಪ್ರಸ್ತಾಪಿಸಲಾಗಿದೆ.

ಶಾಲೆ ಮಕ್ಕಳ ಜೊತೆ ಸಿಎಂ ಸಂವಾದ

ಕಾರ್ಯಕ್ರಮಕ್ಕೂ ಮುನ್ನ ವಿಧಾನಸಭೆ ಅಧಿವೇಶನ ವೀಕ್ಷಿಸಲು ಬಂದಿದ್ದ ಶಾಲೆ ಮಕ್ಕಳ ಜೊತೆ ಸಿಎಂ ಸಿದ್ದರಾಮಯ್ಯ ಸಂವಾದ ನಡೆಸಿ ಸರ್ಕಾರದ ಕಾರ್ಯವೈಖರಿ, ಅಭಿವೃದ್ಧಿ ಕೆಲಸಗಳ ಬಗ್ಗೆ ಮಕ್ಕಳು ಕೇಳಿದ ಪ್ರಶ್ನೆಗೆ ಉತ್ತರಿಸಿದರು


Spread the love

About Laxminews 24x7

Check Also

ಗರ್ಭಿಣಿಯಾದಳೆಂದು ಪತ್ನಿಯನ್ನೇ ಕೊಲೆ ಮಾಡಿದ ಪತಿ!

Spread the loveಚಾಮರಾಜನಗರ : ಗರ್ಭಿಣಿಯೊಬ್ಬರನ್ನು ತಾಳಿ ಕಟ್ಟಿದ ಪತಿಯೇ ಕೊಲೆ ಮಾಡಿರುವ ಘಟನೆ ತಾಲೂಕಿನ ಡೊಳ್ಳಿಪುರದ ತೋಟದ ಮನೆಯಲ್ಲಿ ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ