Breaking News

ಗುಡ್​ನ್ಯೂಸ್: ಸಹಕಾರಿ ಬ್ಯಾಂಕ್‌ಗಳ ಸಾಲದ ಮೇಲಿನ ಬಡ್ಡಿ ಮನ್ನಾ, ಸಿದ್ದರಾಮಯ್ಯ ಘೋಷಣೆ

Spread the love

ಬೆಳಗಾವಿ (ಡಿಸೆಂಬರ್ 15): ಸಹಕಾರಿ ಬ್ಯಾಂಕ್‌ಗಳ (cooperative bank) ಸಾಲ ಮೇಲಿನ ಬಡ್ಡಿ ಮನ್ನಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರು ಘೋಷಿಸಿದ್ದಾರೆ.

ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದ ಕೊನೆ ದಿನವಾದ ಇಂದು (ಡಿಸೆಂಬರ್ 15) ಈ ಘೋಷಣೆ ಮಾಡಿದ್ದು. ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಕ್ಕೆ ಸಂಬಂಧಿಸಿದಂತೆ ಅವಧಿಯೊಳಗೆ ಸಾಲ ಮರುಪಾವತಿ ಮಾಡಿದವರ ಬಡ್ಡಿ ಮನ್ನಾ ಆಗಲಿದೆ ಎಂದು ಮಾಹಿತಿ ನೀಡಿದರು.

ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತ ಚರ್ಚೆಗೆ ಉತ್ತರ ನೀಡುತ್ತಿರುವ ವೇಳೆ ಸಿಎಂ ಸಿದ್ದರಾಮಯ್ಯ ಹಲವು ಘೋಷಣೆಗಳನ್ನು ಮಾಡಿದರು. ಅದರಲ್ಲಿ ಬಡ್ಡಿ ಮನ್ನಾ ಸಹ ಒಂದು. ಹಾಗಾದ್ರೆ ಅಧಿವೇಶನದ ಕೊನೆ ದಿನವಾದ ಇಂದು ಸಿಎಂ ಏನೆಲ್ಲಾ ಘೋಷಣೆಗಳನ್ನು ಮಾಡಿದ್ದಾರೆ ಎನ್ನುವ ವಿವರ ಈ ಕೆಳಗಿನಂತಿದೆ.

  • ನಂಜುಂಡಪ್ಪ ವರದಿಯ ಅನುಷ್ಠಾನ ಹಾಗೂ ಅದರ ಫಲಶ್ರುತಿ ಅಧ್ಯಯನ ಮಾಡಲು ನುರಿತ ಅರ್ಥಶಾಸ್ತ್ರಜ್ಞರೊಬ್ಬರ ಅಧ್ಯಕ್ಷತೆಯಲ್ಲಿ ಉನ್ನತಾಧಿಕಾರ ಸಮಿತಿ ರಚನೆ.
  • ಸಹಕಾರ ಬ್ಯಾಂಕ್ ಗಳಲ್ಲಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಅಸಲನ್ನು ಕಟ್ಟಿದರೆ ಸಂಪೂರ್ಣ ಬಡ್ಡಿ ಮನ್ನಾ.
  • ಬೆಳಗಾವಿ ಸಮೀಪ ಸುಮಾರು 2000 ಎಕರೆ ಪ್ರದೇಶದಲ್ಲಿ ಹೊಸ ಕೈಗಾರಿಕಾ ಪ್ರದೇಶ, 500 ಎಕರೆ ಪ್ರದೇಶದಲ್ಲಿ ಫೌಂಡ್ರಿ ಕ್ಲಸ್ಟರ್ ಸ್ಥಾಪನೆ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಏರೋಸ್ಪೇಸ್ ಆಧಾರಿತ ಕೈಗಾರಿಕೆಗಳ ಬೆಳವಣಿಗೆಗೆ ವಿಶೇಷ ಒತ್ತು.
  • ಧಾರವಾಡ ಸಮೀಪ ಸುಮಾರು 3000 ಎಕರೆ ಪ್ರದೇಶದಲ್ಲಿ ಹೊಸ ಕೈಗಾರಿಕಾ ಪ್ರದೇಶ ಸ್ಥಾಪನೆ.
  • ರಾಯಚೂರಿನಲ್ಲಿ ಹತ್ತಿ ಆಧಾರಿತ ಕೈಗಾರಿಕೆಗಳ ಸ್ಥಾಪನೆಗೆ ವಿಶೇಷ ಒತ್ತು.
  • ವಿಜಯಪುರದಲ್ಲಿ ಉತ್ಪಾದನಾ ಕ್ಲಸ್ಟರ್ ಅಂದಾಜು 1500 ಎಕರೆ ಪ್ರದೇಶದಲ್ಲಿ ಸ್ಥಾಪನೆ.

Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ