Breaking News

ಡಿಕೆಶಿ ವಿರುದ್ಧದ ಪ್ರಕರಣದ ಸಿಬಿಐ ತನಿಖೆ ಚರ್ಚೆಗೆ ಅವಕಾಶ ನಿರಾಕರಿಸಿದ ಸಭಾಪತಿ

Spread the love

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣದ ತನಿಖೆ ನಡೆಸಲು ಸಿಬಿಐಗೆ ನೀಡಿದ್ದ ಅನುಮತಿ ವಾಪಸ್ ಪಡೆದ ರಾಜ್ಯ ಸರ್ಕಾರದ ಕ್ರಮದ ಕುರಿತು ಚರ್ಚಿಸಲು, ಅವಕಾಶ ಕೋರಿ ಬಿಜೆಪಿ ಮಂಡಿಸಿದ ನಿಲುವಳಿ ಸೂಚನೆಯನ್ನು ಸಭಾಪತಿ ಬಸವರಾಜ ಹೊರಟ್ಟಿ ತಿರಸ್ಕರಿಸಿ ರೂಲಿಂಗ್ ನೀಡಿದರು.

ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಕಡೆಯ ದಿನವಾದ ಇಂದು ವಿಧಾನ ಪರಿಷತ್​ನಲ್ಲಿ ಬಿಜೆಪಿ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ, ಸಾರ್ವಜನಿಕ ಮಹತ್ವದ ವಿಷಯದಡಿ ಡಿ.ಕೆ.ಶಿವಕುಮಾರ್ ವಿರುದ್ಧ ತನಿಖೆಗೆ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್ ಪಡೆದ ಸರ್ಕಾರದ ಕ್ರಮದ ಕುರಿತು ಚರ್ಚೆಗೆ ಅವಕಾಶ ಕೋರಿ ನಿಲುವಳಿ ಸೂಚನೆ ಮಂಡಿಸಿ‌ದರು.

ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣದ ಸಿಬಿಐ ತನಿಖೆ ಈಗಾಗಲೇ ಶೇ.90ರಷ್ಟು ಪೂರ್ಣಗೊಂಡಿದೆ. ಈ ಹಂತದಲ್ಲಿ ಕಳೆದ ಸರ್ಕಾರ ನೀಡಿದ್ದ ಅನುಮತಿಯನ್ನು ಈ ಸರ್ಕಾರ ರದ್ದುಗೊಳಿಸಿದೆ. ಅತ್ಯಂತ ಪ್ರಭಾವಿ ವ್ಯಕ್ತಿಯ ವಿರುದ್ಧ ತನಿಖೆ ನಡೆಯುತ್ತಿತ್ತು. ಉಪಮುಖ್ಯಮಂತ್ರಿ ಹುದ್ದೆಯಲ್ಲಿರುವ ವ್ಯಕ್ತಿಯ ವಿರುದ್ಧದ ಆರೋಪ ಇದು. ಹಾಗಾಗಿ ಈ ವಿಚಾರದ ಕುರಿತು ಚರ್ಚೆಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.

ಬಿಜೆಪಿ ಮಂಡಿಸಿದ ನಿಲುವಳಿ ಸೂಚನೆಗೆ ಆಕ್ಷೇಪ ವ್ಯಕ್ತಪಡಿಸಿದ ಕಾನೂನು ಸಚಿವ ಹೆಚ್.ಕೆ.ಪಾಟೀಲ್, ಈ ವಿಷಯವನ್ನು ನಿಲುವಳಿ ಸೂಚನೆ ಮೂಲಕ ತರುವ ಪ್ರಯತ್ನ ಆಶ್ಚರ್ಯ ತಂದಿದೆ. ಕೋಟಾ ಶ್ರೀನಿವಾಸ ಪೂಜಾರಿ ಪ್ರತಿಪಕ್ಷದ ನಾಯಕರಾಗಿ, ಸಭಾ ನಾಯಕರಾಗಿ ಕೆಲಸ ಮಾಡಿದ್ದವರು. ಈ ವಿಷಯದಲ್ಲಿ ತಂದಿದ್ದು ಅಚ್ಚರಿಯಾಗಿದೆ. ಹಲವು ವಿಷಯಗಳನ್ನು ದಿನನಿತ್ಯ ಮಾಧ್ಯಮಗಳಲ್ಲಿ ನೋಡುತ್ತಿದ್ದೇವೆ. ಹಲವಾರು ವಿಚಾರಗಳಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಭಿನ್ನ ನಿಲುವುಗಳನ್ನು ನೋಡುತ್ತಿದ್ದೇವೆ. ಕೇಂದ್ರ ಸರ್ಕಾರ ಹಲವಾರು ಸಂದರ್ಭದಲ್ಲಿ ಸಿಬಿಐ, ಇಡಿಗಳನ್ನ ದುರುಪಯೋಗಪಡಿಸಿಕೊಳ್ಳುತ್ತಿದೆ ಎನ್ನುವ ಆಪಾದನೆಯನ್ನು ನಾವು ಮಾಡುತ್ತಿದ್ದೇವೆ. ಬಿಜೆಪಿಯವರೂ ಕೂಡ ರಾಜ್ಯ ಸರ್ಕಾರಗಳ ಮೇಲೆ ಆರೋಪ ಮಾಡುತ್ತಿದ್ದಾರೆ. ಇದು ಹೊಸತೇನಲ್ಲ. ಆದರೆ ಈಗ ಕೋಟ ಶ್ರೀನಿವಾಸ ಪೂಜಾರಿ ಅವರು ಮಾಡಿರುವ ಪ್ರಸ್ತಾಪ ನಮ್ಮ ವಿಧಾನ ಪರಿಷತ್ತಿನ ಕಾರ್ಯವಿಧಾನ ಮತ್ತು ನಡಾವಳಿಯ ಯಾವ ನಿಯಮದಲ್ಲಿ ಚರ್ಚೆಗೆ ಬರಲಿದೆ ಎಂದು ಪ್ರಶ್ನಿಸಿದರು.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣದ ಮಾಸ್ಟರ್​​ ಮೈಂಡ್ ದಕ್ಷಿಣಕನ್ನಡ ಮಾಜಿ ಡಿಸಿ ಸಸಿಕಾಂತ್ ಸೆಂಥಿಲ್ ಎಂದು ಜನಾರ್ದನ ರೆಡ್ಡಿ ಗಂಭೀರ ಆರೋಪ

Spread the love ಬೆಂಗಳೂರು/ದಕ್ಷಿಣ ಕನ್ನಡ: “ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತರದ ಹಿಂದಿನ ಮಾಸ್ಟರ್​ ಮೈಂಡ್​​ ತಮಿಳುನಾಡಿನ ತಿರುವಲ್ಲೂರಿನ ಕಾಂಗ್ರೆಸ್​ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ