Breaking News

ಖಾಸಗಿ ಹಾಗೂ ಸರ್ಕಾರಿ ವೈದ್ಯರು ಚಿಕಿತ್ಸೆ ನೀಡಲು ಹಿಂದೇಟುನರಳಾಡಿ ಪ್ರಾಣ ಕಳೆದುಕೊಂಡ ವ್ಯಕ್ತಿ………..

Spread the love

ವಿಜಯಪುರ: ಜಿಲ್ಲೆಯಲ್ಲಿ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ವ್ಯಕ್ತಿಯೊಬ್ಬರು ನರಳಾಡಿ ಪ್ರಾಣ ಕಳೆದುಕೊಂಡ ಅಮಾನವೀಯ ಘಟನೆ ನಡೆದಿದೆ.

ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಮಲಘಾಣ ಗ್ರಾಮದ ರೋಗಿ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಉಸಿರಾಟದ ಸಮಸ್ಯೆ ಕಂಡು ಬಂದ ಕೂಡಲೇ ತಡ ರಾತ್ರೀ ವಿಜಯಪುರ ಆಸ್ಪತ್ರೆಗೆ ಕರೆ ತರಲಾಗಿತ್ತು. ಆದರೆ ಈ ವೇಳೆ ಖಾಸಗಿ ಹಾಗೂ ಸರ್ಕಾರಿ ವೈದ್ಯರು ವ್ಯಕ್ತಿಗೆ ಚಿಕಿತ್ಸೆ ನೀಡಲು ಹಿಂದೇಟು ಹಾಕಿದ್ದರು.

ರಾತ್ರಿ ಇಡೀ ಅಲೆದು ಕೊನೆಗೆ ಜಿಲ್ಲಾಧಿಕಾರಿಗಳ ಕಚೇರಿಗೆ ರೋಗಿ ಸಮೇತ ಪೋಷಕರು ಆಗಮಿಸಿದ್ದರು. ಕೊನೆಗೆ ಜಿಲ್ಲಾಧಿಕಾರಿಗಳ ಸೂಚನೆಯ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿ ಚಿಕಿತ್ಸೆಗೆ ದಾಖಲಾಗಿದ್ದರು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ತಡ ರಾತ್ರಿ ರೋಗಿ ಮೃತಪಟ್ಟಿದ್ದಾರೆ.


Spread the love

About Laxminews 24x7

Check Also

ವಚನಾನಂದ ಸ್ವಾಮೀಜಿ ಸತ್ಯಹರಿಶ್ಚಂದ್ರರಲ್ಲ: ಶಾಸಕ ಯತ್ನಾಳ್ ಕಿಡಿ

Spread the loveವಿಜಯಪುರ: ವಚನಾನಂದ ಸ್ವಾಮೀಜಿ ಸತ್ಯಹರಿಶ್ಚಂದ್ರರಲ್ಲ, ಎರಡೂ ಟ್ರಸ್ಟ್‌ಗಳನ್ನು ಖಾಸಗಿ ಆಸ್ತಿ ಮಾಡ್ಕೊಂಡಿದ್ದಾರೆ ಎಂದು ವಿಜಯಪುರ ಶಾಸಕ ಬಸನಗೌಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ