Home / ರಾಜಕೀಯ / ಬಾಡಿಗೆಗೂ ಕೊಠಡಿ ಸಿಗದೆ ಗ್ರಾಮಸ್ಥರೇ ನಿರ್ಮಿಸಿದ್ರು ಅಂಗನವಾಡಿ ಕೇಂದ್ರ

ಬಾಡಿಗೆಗೂ ಕೊಠಡಿ ಸಿಗದೆ ಗ್ರಾಮಸ್ಥರೇ ನಿರ್ಮಿಸಿದ್ರು ಅಂಗನವಾಡಿ ಕೇಂದ್ರ

Spread the love

ಕಾರವಾರ : ಬಾಲ್ಯ ಶಿಕ್ಷಣದಿಂದ ವಂಚಿತರಾಗುವುದನ್ನು ತಪ್ಪಿಸಲು ಸರ್ಕಾರ ಅಂಗನವಾಡಿಗಳನ್ನು ತೆರೆದಿದೆ. ಆದರೆ, ಉತ್ತರಕನ್ನಡ ಜಿಲ್ಲೆಯ ಅದೆಷ್ಟೋ ಕಡೆ ಅಂಗನವಾಡಿಗಳಿಗೆ ಸ್ವಂತ ಕಟ್ಟಡಗಳೇ ಇಲ್ಲ. ಇದ್ದ ಕೆಲ ಕಟ್ಟಡಗಳು ಶಿಥಿಲಾವಸ್ಥೆಗೆ ತಲುಪಿ ಬಾಡಿಗೆ ಕಟ್ಟಡದಲ್ಲಿ ನಡೆಸುತ್ತಿದ್ದರೂ ಕೆಲ ತಿಂಗಳಿಂದ ಬಾಡಿಗೆ ಕೂಡ ಕಟ್ಟಿಲ್ಲ. ಹೀಗಾಗಿ, ಕಟ್ಟಡ ಮಂಜೂರಾಗುವುದೆಂದು ಕಾದು ಕುಳಿತಿದ್ದ ಗ್ರಾಮದ ಜನರು ಸರ್ಕಾರದ ವಿಳಂಬ ನೀತಿಗೆ ರೋಸಿ ಹೋಗಿ ಕೊನೆಗೆ ತಾತ್ಕಾಲಿಕ ಅಂಗನವಾಡಿಯೊಂದನ್ನು ನಿರ್ಮಿಸಿಕೊಂಡಿದ್ದಾರೆ.

ಹೌದು, ಒಂದೆಡೆ ಶಿಥಿಲಾವಸ್ಥೆ ತಲುಪಿ ಬಾಗಿಲು ಹಾಕಿಕೊಂಡಿರುವ ಅಂಗನವಾಡಿ ಕಟ್ಟಡ. ಇನ್ನೊಂದೆಡೆ ಪಕ್ಕದಲ್ಲಿಯೇ ತಾತ್ಕಾಲಿಕ ಅಂಗನವಾಡಿ ನಿರ್ಮಾಣಕ್ಕೆ ಮುಂದಾಗಿರುವ ಗ್ರಾಮಸ್ಥರು. ಮತ್ತೊಂದೆಡೆ, ನಿರ್ಮಾಣಗೊಂಡ ಅಂಗನವಾಡಿಯಲ್ಲಿ ಖುಷಿಯಿಂದ ಪೂಜೆ ಸಲ್ಲಿಸುತ್ತಿರುವ ಮಕ್ಕಳು. ಈ ಎಲ್ಲಾ ದೃಶ್ಯಗಳು ಕಂಡುಬಂದಿದ್ದು ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಉಡಳ್ಳಿ ಗ್ರಾಮದಲ್ಲಿ.

ಕಳೆದ ನಾಲ್ಕೈದು ವರ್ಷಗಳಿಂದ ಗ್ರಾಮದಲ್ಲಿರುವ ಅಂಗನವಾಡಿ ಕಟ್ಟಡ ಶಿಥಿಲಾವಸ್ಥೆಗೆ ತಲುಪಿತ್ತು. ಕಳೆದ ವರ್ಷ ಅಂಗನವಾಡಿಯಲ್ಲಿ ಮಕ್ಕಳನ್ನು ಕೂರಿಸುವುದು ಅಪಾಯಕಾರಿ ಆಗಿರುವುದರಿಂದ ಅಧಿಕಾರಿಗಳು ಬಾಡಿಗೆ ಕಟ್ಟಡ ನೋಡಲು ಸೂಚಿಸಿದ್ದರು. ಆದರೆ, ಬಾಡಿಗೆ ಕಟ್ಟಡ ಸಿಗದ ಕಾರಣ ಗ್ರಾಮದಲ್ಲಿಯೇ ಓರ್ವರು ತಮ್ಮ ಮನೆಯ ಒಂದು ಕೋಣೆಯನ್ನು ಮೂರು ತಿಂಗಳ ಅವಧಿಗೆ ಮಕ್ಕಳ ವಿದ್ಯಾರ್ಜನೆಗೆ ನೀಡಿದ್ದರು. ಇತ್ತ ಕಟ್ಟಡ ಮಂಜೂರಾತಿಗಾಗಿ ಕಾದು ಕುಳಿತಿದ್ದ ಊರಿನವರು ಇಲಾಖೆಗಳಿಗೆ, ಅಧಿಕಾರಿಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಇತ್ತ ಮನೆಯವರು ಕೊಟ್ಟ ಅವಧಿ ಕೂಡ ಮುಕ್ತಾಯಗೊಂಡ ಕಾರಣ ಇದೀಗ ಉಡಳ್ಳಿ ಬಿಳೆಗೋಡ ಗ್ರಾಮಸ್ಥರು ಸೇರಿ ಹಳೆ ಅಂಗನವಾಡಿ ಕಟ್ಟಡದ ಬಳಿಯೇ ತಾತ್ಕಾಲಿಕ ಕಟ್ಟಡ ನಿರ್ಮಾಣ ಮಾಡಿದ್ದಾರೆ. ತಾತ್ಕಾಲಿಕ ಅಂಗನವಾಡಿ ಸಿದ್ಧಗೊಂಡಿದ್ದು, ಶುಕ್ರವಾರ ಮಕ್ಳಳು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಪೂಜೆ ಸಲ್ಲಿಸಿ ವಿದ್ಯಾಭ್ಯಾಸ ಆರಂಭ ಮಾಡಿದ್ದಾರೆ.


Spread the love

About Laxminews 24x7

Check Also

ಮೋದಿ ಆಡಳಿತದಲ್ಲಿ ಆರ್ಥಿಕವಾಗಿ ಜಪಾನ್- ಇಂಗ್ಲೆಂಡ್‌ ಕಿಂತ ಮುಂದೆ ಭಾರತ ಇದೆ: ಮಾಜಿ ಸಚಿವ ಮುರಗೇಶ ನಿರಾಣಿ…!!

Spread the love ಮೋದಿ ಆಡಳಿತದಲ್ಲಿ ಆರ್ಥಿಕವಾಗಿ ಜಪಾನ್- ಇಂಗ್ಲೆಂಡ್‌ ಕಿಂತ ಮುಂದೆ ಭಾರತ ಇದೆ: ಮಾಜಿ ಸಚಿವ ಮುರಗೇಶ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ