Breaking News

ಮಹಿಳೆ ವಿವಸ್ತ್ರಗೊಳಿಸಿ ಮೆರವಣಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಕತಿ ಠಾಣೆಯ ಪೊಲೀಸ್ ಇನ್ಸ್​ಪೆಕ್ಟರ್ ಅಮಾನತು

Spread the love

ಬೆಳಗಾವಿ: ಇಲ್ಲಿಯ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ ಅಮಾನವೀಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಕತಿ ಠಾಣೆಯ ಪೊಲೀಸ್ ಇನ್ಸ್​ಪೆಕ್ಟರ್​ ವಿಜಯಕುಮಾರ ಸಿನ್ನೂರ ಅವರನ್ನು ಅಮಾನತುಗೊಳಿಸಿ ನಗರ ಪೊಲೀಸ್ ಆಯುಕ್ತ ಎಸ್ ಎನ್ ಸಿದ್ದರಾಮಪ್ಪ ಆದೇಶ ಹೊರಡಿಸಿದ್ದಾರೆ.

 

ಹೈಕೋರ್ಟ್ ಈ ಸಂಬಂಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು, ಸರ್ಕಾರಕ್ಕೆ ಮತ್ತು ಪೊಲೀಸ್ ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ನಗರ ಪೊಲೀಸ್ ಆಯುಕ್ತ ಎಸ್ ಎನ್ ಸಿದ್ದರಾಮಪ್ಪ ಅವರು ಕಾಕತಿ ಸಿಪಿಐ ವಿಜಯಕುಮಾರ ಸಿನ್ನೂರ ಅವರನ್ನು ಅಮಾನತು ಮಾಡಿದ್ದಾರೆ.

ಬೆಳಗಾವಿಗೆ ಆಗಮಿಸಿದ ಕೇಂದ್ರ ಬಿಜೆಪಿ ತಂಡ: ಬಿಜೆಪಿ ಕೂಡ ಈ ಅಮಾನವೀಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಇಂದು ಬೆಳಗ್ಗೆ ದೆಹಲಿಯಿಂದ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಸಂಸದರಾದ ಅಫ್ರಜಿತಾ ಸಾರಂಗಿ, ಶ್ರೀಮತಿ ಸುನಿತಾ ದುಗ್ಗಲ್, ಲಾಕೆಟ್ ಚಟರ್ಜಿ, ರಂಜಿತಾ ಕೋಲಿ, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಆಶಾ ಲಾಕ್ರ ಅವರ ನಿಯೋಗ ಆಗಮಿಸಿದೆ. ಈ ತಂಡ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತ ಮಹಿಳೆಯ ಆರೋಗ್ಯ ವಿಚಾರಿಸಿ ಧೈರ್ಯ ತುಂಬಲಿದ್ದು, ಬಳಿಕ ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಲಿದೆ.

 ಬೆಳಗಾವಿಗೆ ಆಗಮಿಸಿದ ಕೇಂದ್ರ ಬಿಜೆಪಿ ತಂಡಸಂತ್ರಸ್ತೆ ಆರೋಗ್ಯ ವಿಚಾರಿಸಿದ ರಾಷ್ಟ್ರೀಯ ಮಹಿಳಾ ಆಯೋಗ: ದುಷ್ಕರ್ಮಿಗಳಿಂದ ಅಮಾನವೀಯ ಕೃತ್ಯಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತ ಮಹಿಳೆಯ ಆರೋಗ್ಯವನ್ನು ರಾಷ್ಟ್ರೀಯ ಮಹಿಳಾ ಆಯೋಗ ವಿಚಾರಿಸಿತು. ಇಂದು ಬೆಳಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಖಿ ಒನ್ ಸ್ಟಾಪ್ ಸೆಂಟರ್​ಗೆ ಭೇಟಿ ನೀಡಿದ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಡೆಲಿನಾ ಖೊಂಗಡುಪ್ ನೇತೃತ್ವದ ತಂಡವು ಸಂತ್ರಸ್ತ ಮಹಿಳೆಗೆ ಸಾಂತ್ವನ ಹೇಳಿ ಧೈರ್ಯ ತುಂಬಿತು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ