Breaking News

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಬದ್ಧ, ಪ್ರತ್ಯೇಕ ರಾಜ್ಯದ ಬೇಡಿಕೆ ಸಲ್ಲದು: ಸಿಎಂ

Spread the love

ಬೆಂಗಳೂರು/ಬೆಳಗಾವಿ: ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಪ್ರತ್ಯೇಕ ರಾಜ್ಯದ ಬೇಡಿಕೆ ಸಲ್ಲದು ಹಾಗೂ ಅದು ತಾರತಮ್ಯ ನಿವಾರಣೆಗೆ ಪರಿಹಾರವೂ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಿಧಾನಸಭೆಯಲ್ಲಿ ಇಂದು ಉತ್ತರ ಕರ್ನಾಟಕದ ಮೇಲಿನ ಚರ್ಚೆಗೆ ಉತ್ತರಿಸಿದ ಅವರು, “ಪ್ರತ್ಯೇಕ ಕರ್ನಾಟಕಕ್ಕೆ ಒತ್ತಾಯ ಮಾಡುವುದು ಏಕೀಕರಣಕ್ಕೆ ಹೋರಾಡಿ, ಪ್ರಾಣ ತ್ಯಾಗ ಮಾಡಿದವರಿಗೆ ನಾವು ಮಾಡುವ ಅವಮಾನ. ಏಕೀಕರಣಕ್ಕಾಗಿ ಬಹಳ ಜನ ಹೋರಾಡಿದರು. ಭಾಷಾವಾರು ಪ್ರಾಂತ್ರ್ಯ ರಚನೆಯಾಗುವಾಗಲೂ ಹೋರಾಟ ಮಾಡಿದವರಿದ್ದಾರೆ. ಹೈದರಾಬಾದ್ ಕರ್ನಾಟಕಕ್ಕೆ 371ಗೆ ತಿದ್ದುಪಡಿ ಆಗಿ 371 ಜೆ ಪರಿಚ್ಛೇದಕ್ಕಾಗಿ ಮಲ್ಲಿಕಾರ್ಜುನ ಖರ್ಗೆ, ಧರ್ಮಸಿಂಗ್, ವೈಜನಾಥ್ ಪಾಟೀಲ್ ಮುಂತಾದವರು ಹೋರಾಡಿದ್ದಾರೆ. ನಾನು ಹಿಂದೆ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ 2014 ಮತ್ತು 2017ರಲ್ಲಿ ಉತ್ತರ ಕರ್ನಾಟಕದ ಬಗ್ಗೆ ಚರ್ಚೆಯಾಗಿತ್ತು. ಈ ಬಗ್ಗೆ ಎರಡು ಗಂಟೆಗಳಿಗೂ ಹೆಚ್ಚು ಕಾಲ ಉತ್ತರ ನೀಡಿದ್ದೆ” ಎಂದು ಸಿಎಂ ನೆನಪು ಮಾಡಿಕೊಂಡರು.

“ಅಭಿವೃದ್ಧಿಗಾಗಿ ಮೀಸಲಿಟ್ಟ ಅನುದಾನ ಖರ್ಚಾಗಿ ಅಭಿವೃದ್ಧಿಯಾಗಬೇಕು. ಕಿತ್ತೂರು ಕರ್ನಾಟದ 5 ತಾಲೂಕುಗಳು ಸೇರಿದಂತೆ ಅತ್ಯಂತ ಹಿಂದುಳಿದ ತಾಲೂಕುಗಳಿಗೂ ಅನುದಾನ ಕೊಡಲಾಗುವುದು. ಕಲ್ಯಾಣ ಕರ್ನಾಟಕಕ್ಕೆ 2013-14ರಿಂದ ಈವರೆಗೆ 14877.36 ಕೋಟಿ ರೂಪಾಯಿಗಳು ಮೀಸಲಿಡಲಾಗಿದೆ. ಬಿಡುಗಡೆಯಾಗಿದ್ದು 10280 ಕೋಟಿ ರೂಪಾಯಿ ಹಾಗೂ 8330 ಕೋಟಿ ರೂಪಾಯಿ ವೆಚ್ಚವಾಗಿದೆ. ಮುಂದಿನ ವರ್ಷದಿಂದ 5000 ಕೋಟಿ ರೂಪಾಯಿಗಳನ್ನು ಕಲ್ಯಾಣ ಕರ್ನಾಟಕಕ್ಕೆ ನೀಡಲಾಗುವುದು. ಮುಂಬೈ ಕರ್ನಾಟಕದ ಹಿಂದುಳಿದ ತಾಲೂಕುಗಳಿಗೂ ಅನುದಾನ ನೀಡಲಾಗುವುದು” ಎಂದು ತಿಳಿಸಿದರು.

 


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ