Breaking News

ಹಿಂದೂ ಕಾರ್ಯಕರ್ತರ ನೆರವಿಗೆ ಬೆಂಗಳೂರಿನಲ್ಲಿ ಕಚೇರಿ ಆರಂಭ: ಯತ್ನಾಳ್

Spread the love

ವಿಜಯಪುರ: ರಾಜ್ಯದಲ್ಲಿ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ಹೀಗಾಗಿ ಸಂತ್ರಸ್ತರಿಗೆ ಕಾನೂನು ನೆರವು ನೀಡುವುದಕ್ಕಾಗಿ ಶೀಘ್ರದಲ್ಲೇ ಬೆಂಗಳೂರಿನಲ್ಲಿ ಕಛೇರಿ ತೆರೆಯುತ್ತೇನೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭರವಸೆ ನೀಡಿದ್ದಾರೆ.

 

ಶನಿವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಅಭಿಪ್ರಾಯ ಹಂಚಿಕೊಂಡರೂ ಪೊಲೀಸರು ಪ್ರಕರಣ ದಾಖಲಿಸುವ, ಠಾಣೆಗೆ ಕರೆದೊಯ್ದು ಮುಚ್ಚಳಿಕೆ ಬರೆಸಿಕೊಳ್ಳುವ ಮೂಲಕ ದೌರ್ಜನ್ಯ ನಡೆಸುತ್ತಿದ್ದಾರೆ. ಅಭಿವ್ಯಕ್ತಿ ಸ್ವಾತಂತ್ರ್ಯ, ವಾಕ್ ಸ್ವಾತಂತ್ರ್ಯದ ಹರಣ ನಡೆಯುತ್ತಿದೆ. ಇಂಥ ದೌರ್ಜನ್ಯದಿಂದ ಬಾಧಿತರಿಗೆ ಉಚಿತವಾಗಿ ಕಾನೂನು ನೆರವು ನೀಡುವುದಕ್ಕಾಗಿ ಎರಡು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಛೇರಿ ತೆರೆಯುವುದಾಗಿ ಹೇಳಿದರು.

ಸದರಿ ಕೇಂದ್ರದಲ್ಲಿ ಉಚಿತ ಕಾನೂನು ನೆರವು ನೀಡಲು ಹಲವು ವಕೀಲರು ಮುಂದೆ ಬಂದಿದ್ದಾರೆ. ಬಾಧಿತರಿಗೆ ಉಚಿತ ಕಾಲಿಂಗ್ ಸೇವೆ ಆರಂಭಿಸಿ, ಭಯದಿಂದ ಬಳಲಿರುವ ಬಿಜೆಪಿ-ಹಿಂದೂ ಕಾರ್ಯಕರ್ತರಲ್ಲಿ ಧೈರ್ಯ ತುಂಬುವ ಕೆಲಸ ಮಾಡಲಿದ್ದೇನೆ ಎಂದರು.


Spread the love

About Laxminews 24x7

Check Also

ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯಬೇಕು. ಇಲ್ಲದಿದ್ದರೆ ಸರ್ಕಾರವೇ ಪತನವಾಗುತ್ತದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟ‌ರ್ ಭವಿಷ್ಯ ನುಡಿದಿದ್ದಾರೆ.

Spread the love ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯಬೇಕು. ಇಲ್ಲದಿದ್ದರೆ ಸರ್ಕಾರವೇ ಪತನವಾಗುತ್ತದೆ ಎಂದು ಮಾಜಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ