Breaking News

ಹೊಸ ವಂಟಮುರಿ ಸಂತ್ರಸ್ತ ಮಹಿಳೆಗೆ ಎರಡು ಎಕರೆ ಜಮೀನು ಮಂಜೂರು: ಸಚಿವ ಸತೀಶ್ ಜಾರಕಿಹೊಳಿ

Spread the love

ಬೆಳಗಾವಿ: ಹೊಸ ವಂಟಮುರಿ ಗ್ರಾಮದಲ್ಲಿ ಇತ್ತೀಚೆಗೆ ದೌರ್ಜನ್ಯಕ್ಕೆ ಒಳಗಾಗಿರುವ ಮಹಿಳೆಗೆ ಸರಕಾರವು 2.03 ಎಕರೆ ಜಮೀನು ಮಂಜೂರು ಮಾಡಿ ಆದೇಶಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ತಿಳಿಸಿದ್ದಾರೆ.

ದೌರ್ಜನ್ಯಕ್ಕೆ ಒಳಗಾಗಿರುವ ಕಾಕತಿ ಪೊಲೀಸ್ ಠಾಣೆ ವ್ಯಾಪ್ತಿಯ ಹೊಸ ವಂಟಮುರಿ ಗ್ರಾಮದ ಸಂತ್ರಸ್ತ ಮಹಿಳೆಗೆ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ಭೂ ಒಡೆತನ ಯೋಜನೆಯಡಿ ಜಮೀನು ಮಂಜೂರು‌ ಮಾಡಿ ಆದೇಶಿಸಲಾಗಿರುತ್ತದೆ.

ಪರಿಶಿಷ್ಟ ವರ್ಗಗಳ ಕಲ್ಯಾಣ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಚಿವರಾದ ಬಿ.ನಾಗೇಂದ್ರ ಅವರು ವಿಶೇಷ ಪ್ರಕರಣವೆಂದು ಪರಿಗಣಿಸಿ ತಕ್ಷಣವೇ ಜಮೀನು ಮಂಜೂರಾತಿಗೆ ನಿರ್ದೇಶನ ನೀಡಿದ್ದರು.

ಈ ಹಿನ್ನೆಲೆಯಲ್ಲಿ ನೊಂದ ಮಹಿಳೆಗೆ ಆರ್ಥಿಕ ಸ್ಥಿರತೆ ಒದಗಿಸುವ ದೃಷ್ಟಿಯಿಂದ ವಿಶೇಷ ಪ್ರಕರಣವೆಂದು ಪರಿಗಣಿಸಿ ಜಮೀನು ಮಂಜೂರು ಮಾಡಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಅನುಮೋದನೆ ನೀಡಿರುತ್ತದೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

2.03 ಎಕರೆ ಜಮೀನು ಮಂಜೂರಾತಿ ಜತೆಗೆ ಸರಕಾರವು ಈಗಾಗಲೇ ಐದು ಲಕ್ಷ ರೂಪಾಯಿ ಪರಿಹಾರವನ್ನು ಕೂಡ ಘೋಷಿಸಿರುತ್ತದೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ