Breaking News

ಮಾದಕ ದಂಧೆಕೋರರ ಮೇಲೆ ಪೊಲೀಸರ ಹದ್ದಿನ ಕಣ್ಣು

Spread the love

ಬೆಂಗಳೂರು : ಹೊಸ ವರ್ಷದ ಸಂಭ್ರಮಾಚರಣೆಗೆ ದಿನಗಣನೆ ಆರಂಭವಾಗಿದೆ. 2024 ಅನ್ನು ಅದ್ಧೂರಿಯಾಗಿ ಸ್ವಾಗತಿಸಲು ಜನರು ಕಾಯುತ್ತಿದ್ದಾರೆ.

ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ಬಹಳ ವಿಶೇಷವಾಗಿದ್ದು, ಮಾದಕ ಸರಬರಾಜು ದಂಧೆಯಲ್ಲಿ ತೊಡಗಿರುವವರ ಮೇಲೆ ನಿಗಾ ವಹಿಸುವಂತೆ ಸೂಚನೆ ನೀಡಲಾಗಿದೆ.

ಹೌದು,ಹೊಸ ವರ್ಷದ ಸಂಭ್ರಮಾಚರಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮಾದಕ ಸರಬರಾಜು ದಂಧೆಯಲ್ಲಿ ತೊಡಗಿರುವವರ ಮೇಲೆ ವಿಶೇಷ ನಿಗಾ ವಹಿಸುವಂತೆ ಸಿಬ್ಬಂದಿಗೆ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಸೂಚನೆ ನೀಡಿದ್ದಾರೆ. ಪಾರ್ಟಿ ಪ್ರಿಯರ ನೆಚ್ಚಿನ ಸ್ಥಳಗಳಿಗೆ ಮಾದಕ ಪದಾರ್ಥಗಳು ಹೆಚ್ಚಾಗಿ ಸರಬರಾಜು ಆಗುವುದರಿಂದ ಆ ಸ್ಥಳಗಳಲ್ಲಿ ಹೆಚ್ಚಿನ ನಿಗಾ ವಹಿಸುವಂತೆ ಹಾಗೂ ಇತ್ತೀಚಿಗೆ ಜೈಲಿನಿಂದ ಬಿಡುಗಡೆಯಾಗಿರುವ ಮಾದಕ ದಂಧೆಕೋರರ ಮೇಲೆ ಕಣ್ಣಿಡಲು ಸೂಚಿಸಲಾಗಿದೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ