ಬೆಂಗಳೂರು : 2024ರ ಲೋಕಸಭಾ ಚುನಾವಣೆಯಲ್ಲಿ ಹಾಲಿ ಕ್ಷೇತ್ರ ಹುಬ್ಬಳ್ಳಿ-ಧಾರವಾಡದಿಂದ ಬಿಜೆಪಿ ಅಭ್ಯರ್ಥಿಯಾಗಿ ನಾನೇ ಸ್ಪರ್ಧಿಸುತ್ತೇನೆ.
ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟಪಡಿಸಿದರು.
ವಸಂತ ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ಕಾಂಗ್ರೆಸ್‌ನಿಂದ ಯಾರೇ ಅಭ್ಯರ್ಥಿಯಾದರೂ ಬಿಜೆಪಿಯಿಂದ ನಾನೇ ಅಭ್ಯರ್ಥಿ. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್‌ನಿಂದ ಸ್ಪರ್ಧಿಸಿದರೂ ಸಂತೋಷ. ಅವರ ಸ್ಪರ್ಧೆಯಿಂದ ನನಗೇನೂ ಭಯವಿಲ್ಲ. ಅದು ಅವರ ಪಾರ್ಟಿಯ ನಿರ್ಧಾರ ಎಂದರು.
ಸಂಸತ್ ಮೇಲಿನ ದಾಳಿಗೆ ನಿರುದ್ಯೋಗ ಕಾರಣ ಎಂಬ ರಾಹುಲ್ ಗಾಂಧಿ ಹೇಳಿಕೆ ಚೈಲ್ಡಿಶ್ ಆಗಿದೆ. ನಿರುದ್ಯೋಗ ಸಮಸ್ಯೆ ಬಗ್ಗೆ ಚರ್ಚೆಯಾಗಲಿ, ಬೇಡ ಅನ್ನಲ್ಲ. ಆದರೆ ನಿರುದ್ಯೋಗ ಇದೆ ಅಂತ ಹೇಳಿ ಕೊಲೆ ಮಾಡುತ್ತೇನೆ, ಸಂಸದರನ್ನು ಕೊಲೆ ಮಾಡುತ್ತೇನೆ ಎಂದರೆ ಒಪ್ಪಲು ಸಾಧ್ಯವೇ?. ಕರ್ನಾಟಕದಲ್ಲಿ ನಿರುದ್ಯೋಗ ಇಲ್ಲವೇ? ಛತ್ತೀಸ್‌ಗಢ, ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಇತ್ತು. ಅಲ್ಲಿ ನಿರುದ್ಯೋಗ ಇಲ್ಲವೇ? ನಿರುದ್ಯೋಗ ಇದೆ ಅಂತ ದೇಶವಿರೋಧಿ, ಟೆರರಿಸ್ಟ್‌ಗಳ ಜೊತೆ ಲಿಂಕ್ ಇಟ್ಟುಕೊಳ್ಳುತ್ತೇವೆಯೇ. ಇಂತಹ ಕೃತ್ಯವೆಸಗಲು ನಿಮ್ಮ ಬೆಂಬಲ ಇದೆಯೇ ಎಂದು ರಾಹುಲ್ ಗಾಂಧಿ ಅವರನ್ನು ಜೋಶಿ ಪ್ರಶ್ನಿಸಿದರು.
ಕೊಲೆ ಮಾಡಿದವನಿಗೆ ಅವನದ್ದೇ ಲಾಜಿಕ್ ಇರುತ್ತದೆ. ಆದರೆ ಸಮಾಜ ಒಪ್ಪುತ್ತದೆಯೇ? ರಾಹುಲ್ ಗಾಂಧಿ ಚೈಲ್ಡಿಶ್ ಆಗಿ ಮಾತನಾಡುತ್ತಿದ್ದಾರೆ. ಮೋದಿ ಅವರನ್ನು ವಿರೋಧಿಸುವ ಭರದಲ್ಲಿ ರಾಷ್ಟ್ರದ್ರೋಹಿಗಳನ್ನು ಸಮರ್ಥನೆ ಮಾಡಿಕೊಳ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ತಮ್ಮ ಹೇಳಿಕೆಯ ಬಗ್ಗೆ ಸ್ಪಷ್ಟನೆ ಕೊಡಬೇಕು ಎಂದರು.
Laxmi News 24×7