ಬೆಂಗಳೂರು: ನಾಡಪ್ರಭು ಕೆಂಪೇಗೌಡ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಶೇರ್ ಮಾಡಿರುವ ಆರೋಪದ ಮೇರೆಗೆ ನಟ, ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ವಿರುದ್ಧ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ವಕೀಲ ಆರ್ಎಲ್ಎನ್ ಮೂರ್ತಿ ಎಂಬುವವರು ಶೇಷಾದ್ರಿಪುರಂ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಚೇತನ್ ಪೋಸ್ಟ್ನಲ್ಲೇನಿದೆ?
”ಇಬ್ಬರು ಯೋಧರ ಕಥೆ:
ಕೆಂಪೇಗೌಡ – ಊಳಿಗಮಾನ್ಯ ಜಾತಿ ಲಾಬಿಗಳ ಪ್ರಭಾವದಿಂದಾಗಿ ಈಗ ಪ್ರಮುಖ ಕರ್ನಾಟಕದ ಐಕಾನ್ ಆಗಿರುವ ಅತ್ಯಲ್ಪ ಐತಿಹಾಸಿಕ ವ್ಯಕ್ತಿ.
ಟಿಪ್ಪು ಸುಲ್ತಾನ್ – ಒಬ್ಬ ಐತಿಹಾಸಿಕವಾಗಿ ಬಹಳ ಮಹತ್ವದ ವ್ಯಕ್ತಿ, ಅವರ ಜನ್ಮವು ಮುಸ್ಲಿಮರಾಗಿ ಅವರ ಇಂದಿನ ಮಾನ್ಯತೆಗೆ ಅಡ್ಡಿಯಾಗಿದೆ.
ದುರಾದೃಷ್ಟವಶಾತ್, ಒಬ್ಬ ವ್ಯಕ್ತಿಯು ಹುಟ್ಟಿದ ಸಮುದಾಯಕ್ಕೆ ಅವನ / ಅವಳ ಸಾಮಾಜಿಕ ಕೊಡುಗೆಗಳಿಗಿಂತ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗುತ್ತದೆ” ಎಂದು ನಟ ಚೇತನ್ ಅಹಿಂಸಾ ಅವರು ತಮ್ಮ ಸೋಷಿಯಲ್ ಮೀಡಿಯಾ ಪ್ಲಾಟ್ಫಾರ್ಮ್ಗಳಲ್ಲಿ ಇತ್ತೀಚಿಗೆ ಪೋಸ್ಟ್ ಪ್ರಕಟಿಸಿದ್ದರು. ಇದರಿಂದಾಗಿ ನಾಡಪ್ರಭು ಕೆಂಪೇಗೌಡರಿಗೆ ಅಗೌರವ ತೋರಿ, ಅವಹೇಳನ ಮಾಡಲಾಗಿದೆ ಎಂದು ವಕೀಲ ಆರ್ಎಲ್ಎನ್ ಮೂರ್ತಿಯವರು ದೂರು ನೀಡಿದ್ದಾರೆ. ಅದರನ್ವಯ ಪೊಲೀಸರು ಎನ್.ಸಿ.ಆರ್ ದಾಖಲಿಸಿಕೊಂಡಿದ್ದಾರೆ.
Laxmi News 24×7