Breaking News

ನಾನು ಒಂದು ಬಾರಿ ಕೃಷಿ ಮಂತ್ರಿ ಆಗಬೇಕು ಶಾಸಕ ಕೋನರೆಡ್ಡಿ

Spread the love

ಹುಬ್ಬಳ್ಳಿ, ಡಿ.17: ನವಲಗುಂದ ಕ್ಷೇತ್ರದ ಕಾಂಗ್ರೆಸ್ ಶಾಸಕಎನ್​ಎಚ್​ ಕೋನರೆಡ್ಡಿ(NH Konareddy) ಅವರು ಮತ್ತೊಮ್ಮೆ ಸಚಿವ ಸ್ಥಾನದ ಆಕಾಂಕ್ಷೆಯನ್ನು ಹೊರಹಾಕಿದ್ದಾರೆ. ನಾನು ಒಂದು ಬಾರಿ ಕೃಷಿ ಮಂತ್ರಿ ಆಗಬೇಕು. ಒಬ್ಬ ಶಾಸಕನಾಗಿ ನಾನು ನನ್ನ ಹಕ್ಕು ಕೇಳಿದ್ದೇನೆ. ಒಂದು ಸಾರಿ ಕೃಷಿ ಮಂತ್ರಿ ಮಾಡಿ ಎಂದು ಕೇಳಿದ್ದೇನೆ ಎಂದರು.

ನಮಗೆ ಹೈಕಮಾಂಡ್ ಇದೆ, ಪಕ್ಷದ ಅಧ್ಯಕ್ಷರಿದ್ದಾರೆ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಜೋಡೆತ್ತು. ಕಾರ್ಪೋರೆಟ್​ಗಳು ಮೇಯರ್ ಆಗಬೇಕು ಅಂತಾರೆ. ಶಾಸಕರು ಮಂತ್ರಿ ಆಗಬೇಕು ಅಂತಾರೆ. ಆದರೆ ಎಲ್ಲರನ್ನು ಮಂತ್ರಿ ಮಾಡಲು ಆಗುವುದಿಲ್ಲ.

ಮಂತ್ರಿಯನ್ನಾಗಿಸುವ ವಿಚಾರದಲ್ಲಿ ಮುಖ್ಯಮಂತ್ರಿ ಪರಮಾಧಿಕಾದಕ್ಕೆ ನಾವು ಬದ್ದರಾಗಿದ್ದೇವೆ.

ನನಗೆ ಮಂತ್ರಿ ಸ್ಥಾನ ಸಿಗದಿದ್ದರೂ ಕಾರ್ಯಕರ್ತನಾಗಿ ಸೇವೆ ಮಾಡುತ್ತೇನೆ ಎಂದರು.ಕೋನರೆಡ್ಡಿ ಅವರು ತಾನು ಕೃಷಿ ಮಂತ್ರಿ ಆಗಬೇಕು ಎಂದು ಹೇಳಿಕೊಳ್ಳುತ್ತಿರುವುದು ಇದೇ ಮೊದಲೇನಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ಸಂದರ್ಭದಲ್ಲೇ ಕೃಷಿ ಸಚಿವನಾಗಬೇಕು ಎಂದು ಹೇಳಿಕೆ ನೀಡಿದ್ದರು. ನನಗೂ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವನಾಗಬೇಕು ಎಂಬ ಆಸೆ ಇದೆ ಎಂದು ಹೇಳಿಕೆ ನೀಡಿದ್ದರು.


Spread the love

About Laxminews 24x7

Check Also

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸೌರಶಕ್ತಿ ಬಲ

Spread the loveಹುಬ್ಬಳ್ಳಿ: ವಾಣಿಜ್ಯ ‌ನಗರಿ ಹುಬ್ಬಳ್ಳಿ ವಿಮಾನ ‌ನಿಲ್ದಾಣ ಅಂತಾರಾಷ್ಟ್ರೀಯ ಮಟ್ಟದ ವಿಮಾನ ನಿಲ್ದಾಣವಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ‌. ಇದರ ಭಾಗವಾಗಿ ಹುಬ್ಬಳ್ಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ