Breaking News

ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ ಕಾರು, ಆಂತರಿಕ ರಕ್ತಸ್ರಾವದಿಂದ ಮಗು ಸಾವು

Spread the love

ಬೆಂಗಳೂರು: ಕಾರು ಹರಿದ ಪರಿಣಾಮ ಮಗು ಮೃತಪಟ್ಟಿರುವ ಘಟನೆ ಕಸುವಿನಹಳ್ಳಿಯ ಸಮೃದ್ಧಿ ಅಪಾರ್ಟ್ಮೆಂಟ್ ಮುಂಭಾಗ ನಡೆದಿದೆ. ನೇಪಾಳ ಮೂಲದ ಜೋಗ್ ಜುತಾರ್ ಹಾಗೂ ಅನಿತಾ ದಂಪತಿಯ ಅರ್ಬಿನಾ (3) ಮೃತ ಮಗು.

ಡಿಸೆಂಬರ್ 9ರಂದು ನಡೆದ ಘಟನೆ ಇದಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಬೆಳ್ಳಂದೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಮೃದ್ಧಿ ಅಪಾರ್ಟ್ಮೆಂಟ್​ ಮುಂಭಾಗದಲ್ಲಿ ಆಟವಾಡುತ್ತಿದ್ದ ಮಗುವನ್ನು ಗಮನಿಸದ ಅದೇ ಅಪಾರ್ಟ್ಮೆಂಟ್ ನಿವಾಸಿಯೊಬ್ಬರು ಕಾರು ಹರಿಸಿಕೊಂಡು ಹೋಗಿದ್ದರು. ಕಾರು ಹರಿದಿರುವ ಬಗ್ಗೆ ಮಾಹಿತಿ ಇಲ್ಲದ ಪೋಷಕರು, ಅಪಾರ್ಟ್‌ಮೆಂಟ್ ಗೇಟಿಗೆ ಸಿಲುಕಿಹಾಕಿಕೊಂಡು ಮಗು ಬಿದ್ದಿರಬಹುದೆಂದು ಭಾವಿಸಿ ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ ಭುಜದ ಮೂಳೆ ಮುರಿದು ಗಂಭೀರವಾಗಿ ಗಾಯಗೊಂಡಿದ್ದ ಮಗುವಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದರು.

ನಂತರ ಪೋಷಕರು ಸಂಜಯ್ ಗಾಂಧಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಮಗುವನ್ನು ಪರಿಶೀಲಿಸಿದ ವೈದ್ಯರು ತಕ್ಷಣ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸುವಂತೆ ಸೂಚಿಸಿದ್ದರು. ನಿಮ್ಹಾನ್ಸ್ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮಗು ಮೃತಪಟ್ಟಿತ್ತು. ಮರಣೋತ್ತರ ಪರೀಕ್ಷಾ ವರದಿಯಲ್ಲಿ ಆಂತರಿಕ ರಕ್ತಸ್ರಾವದಿಂದ ಮಗುವಿನ ಮೃತಪಟ್ಟಿರುವುದು ತಿಳಿದು ಬಂದಿತ್ತು. ಮಗುವಿನ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ ಪೋಷಕರು, ಕಾರಣ ಪತ್ತೆಹಚ್ಚುವಂತೆ ಡಿಸೆಂಬರ್ 10 ರಂದು ಬೆಳ್ಳಂದೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಅಪಾರ್ಟ್ಮೆಂಟ್ ಸಮೀಪದ ಸಿಸಿಟಿವಿ ದೃಶ್ಯಗಳನ್ನ ಪರಿಶೀಲಿಸಿದಾಗ, ಮಗುವಿನ ಮೇಲೆ ಕಾರು ಹರಿದಿರುವುದು ಬೆಳಕಿಗೆ ಬಂದಿದೆ. ನ್ಯಾಯಾಲಯದ ಆದೇಶವನ್ನು ಪಡೆದು ಮುಂದಿನ ತನಿಖೆಗಾಗಿ ಪ್ರಕರಣವನ್ನು ಬೆಳ್ಳಂದೂರು ಸಂಚಾರ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ