Breaking News

ಹಗಲು ಹೊತ್ತಿನಲ್ಲಿ ಬೈಕ್​ ಕಳ್ಳತನ ಮಾಡುತ್ತಿದ್ದ ಇಬ್ಬರು ಖದೀಮರ ಬಂಧನ

Spread the love

ಹಾವೇರಿ : ಸಾರ್ವಜನಿಕ ಸ್ಥಳಗಳಲ್ಲಿ ನಿಲ್ಲಿಸಿದ ಬೈಕ್‌ಗಳನ್ನು ಹಗಲು ಹೊತ್ತಿನಲ್ಲಿ ಹೊಂಚು ಹಾಕಿ ಕದಿಯುತ್ತಿದ್ದ ಇಬ್ಬರು ಆರೋಪಿಗಳನ್ನು ಹಾವೇರಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಹಾವೇರಿ ತಾಲೂಕು ಹೊಸರಿತ್ತಿ ಗ್ರಾಮದ ಸಚಿನ್ ಸಂಕ್ಲಿಪುರ (24) ಮತ್ತು ಉಡಚಪ್ಪ ದಿಪಾಳಿ (25) ಎಂದು ಗುರುತಿಸಲಾಗಿದೆ. ಸುಮಾರು 4,65,000 ಲಕ್ಷ ಮೌಲ್ಯದ 13 ಬೈಕ್​ಗಳ ಜಪ್ತಿ ಮಾಡಿ, ವಶಕ್ಕೆ ಪಡೆಯಲಾಗಿದೆ.

ಸಾರ್ವಜನಿಕ ಸ್ಥಳಗಳಲ್ಲಿ ನಿಲ್ಲಿಸಿದ ಬೈಕ್‌ಗಳನ್ನು ಟಾರ್ಗೆಟ್ ಮಾಡಿಕೊಂಡು ಬಸ್ ನಿಲ್ದಾಣ, ಹೋಟೆಲ್, ಹಾಗೂ ತಹಶೀಲ್ದಾರ್ ಕಚೇರಿಯ ಮುಂದೆ ನಿಲ್ಲಿಸಿದ್ದ ಬೈಕಗಳನ್ನು ಕಳ್ಳತನ ಮಾಡಿದ್ದರು. ಹಾವೇರಿ ನಗರದಲ್ಲಿ ಇತ್ತೀಚೆಗೆ ಬೈಕ್‌ಗಳ ಕಳ್ಳತನ ಅಧಿಕವಾಗಿದ್ದ ಹಿನ್ನೆಲೆಯಲ್ಲಿ ಹಾವೇರಿ ಎಸ್ಪಿ ಅಂಶುಕುಮಾರ್ ಹಾವೇರಿ ನಗರ ಠಾಣೆಯ ಸಿಪಿಐ ಮೋತಿಲಾಲ್ ಪವಾರ್ ನೇತೃತ್ವದಲ್ಲಿ ತಂಡ ರಚಿಸಿದ್ದರು. ಈ ತಂಡ ಜಿಲ್ಲೆಯಾದ್ಯಂತ ಆರೋಪಿಗಳ ಪತ್ತೆಗೆ ಜಾಲ ಬೀಸಿತ್ತು.

ಆರೋಪಿಗಳು ಹೆಲ್ಮೆಟ್​ ತಪಾಸಣೆ ವೇಳೆ ಅನುಮಾನಕಾರವಾಗಿ ವರ್ತಸಿದ್ದರು. ಇದನ್ನರಿತ ತಂಡ ಹೆಚ್ಚಿನ ವಿಚಾರಣೆ ನಡೆಸಿದಾಗ ಬೈಕ್‌ಗಳ ಕಳ್ಳತನ ಪ್ರಕರಣಗಳು ಬೆಳಕಿಗೆ ಬಂದಿದೆ. ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು ಮುಂದಿನ ವಿಚಾರಣೆ ಕೈಗೊಂಡಿದ್ದು, ಕದ್ದ ಬೈಕ್‌ಗಳನ್ನು ಕಡಿಮೆ ಹಣಕ್ಕೆ ಮಾರುತ್ತಿದ್ದರು.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ