ಬೆಂಗಳೂರು : ರಾಜ್ಯ ಸರ್ಕಾರವು ಮುಜರಾಯಿ ಇಲಾಖೆಗೆ ಯಾವುದೇ ಖಾಸಗಿ ದೇವಾಲಯಗಳನ್ನು ತೆಗೆದುಕೊಳ್ಳುವುದಿಲ್ಲ ಎಂದು ಸಚಿವ ರಾಮಲಿಂಗ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲ ಹಿಂದೂ ಸಂಘಟನೆಗಳಿಗೆ ಮಾಹಿತಿ ಕೊರತೆಯಿಂದ ತಪ್ಪು ತಿಳುವಳಿಕೆ ಕೊಟ್ಟಿದ್ದಾರೆ.
ರಾಜ್ಯ ಸರ್ಕಾರ ಯಾವುದೇ ಖಾಸಗಿ ದೇವಾಲಯಗಳನ್ನು ಯಾವುದೇ ಕಾರಣಕ್ಕೂ ತೆಗೆದುಕೊಳ್ಳುವುದಿಲ್ಲ. ನಮ್ಮ ಸರ್ಕಾರ ಬಂದ ಮೇಲಂತೂ ಒಂದೂ ತೊಗೊಂಡಿಲ್ಲ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಖಾಸಗಿ ದೇವಾಲಯಗಳನ್ನು ಮುಜರಾಯಿ ವ್ಯಾಪ್ತಿಗೆ ತರುವ ಉದ್ದೇಶದಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ನೋಟಿಸ್ ನೀಡುತ್ತಿದೆ ಎಂದು ಹಿಂದೂ ಸಂಘಟನೆಗಳು ಆರೋಪಿಸಿದ್ದವು. ಇದಕ್ಕೆ ರಾಮಲಿಂಗ ರೆಡ್ಡಿ ಅವರು ಸ್ಪಷ್ಟನೆ ನೀಡಿದ್ದಾರೆ.
Laxmi News 24×7