Breaking News

ಬೆಳಗಾವಿ: ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ಚಾಲನೆ

Spread the love

ಬೆಳಗಾವಿ: ‘ವಿಕಸಿತ ಭಾರತ ಸಂಕಲ್ಪ ಯಾತ್ರೆ’ಯ ನಗರ ಪ್ರದೇಶದ ಅಭಿಯಾನಕ್ಕೆ ಇಲ್ಲಿನ ಪಾಲಿಕೆ ಆವರಣದಲ್ಲಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಹಾಗೂ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಶನಿವಾರ ಚಾಲನೆ ನೀಡಿದರು.

‘ಪ್ರಧಾನಿ ನರೇಂದ್ರ ಮೋದಿ ಅವರ ಸಮಗ್ರ ಅಭಿವೃದ್ಧಿಯ ಕನಸಿನ ಭಾರತ ನಿರ್ಮಾಣದ ಹಿನ್ನೆಲೆಯಲ್ಲಿ ಹಮ್ಮಿಕೊಂಡ ವಿಕಸಿತ ಭಾರತ ಸಂಕಲ್ಪ ಯಾತ್ರೆ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಈಗಾಗಲೇ ಯಶಸ್ವಿಯಾಗಿ ಮುನ್ನಡೆದಿದೆ.

ಪ್ರಸ್ತುತ ನಗರ ಪ್ರದೇಶಗಳಲ್ಲಿ ಮೋದಿ ಗ್ಯಾರಂಟಿ ಯೋಜನೆ ಜಾಗೃತಿಯ ವಾಹನ ಸಂಚಿಸಿ ವಿವಿಧ ಯೋಜನೆಗಳ ಬಗ್ಗೆ ತಿಳವಳಿಕೆ ನೀಡಲಾಗುತ್ತಿದೆ. ಸಾರ್ವಜನಿಕರು ಇದರ ಲಾಭ ಪಡೆದುಕೊಳ್ಳಬೇಕು’ ಎಂದು ಈರಣ್ಣ ಕಡಾಡಿ ಹೇಳಿದರು.

ಶಾಸಕ ಅಭಯ ಪಾಟೀಲ ಮಾತನಾಡಿ, ‘ಜನರಿಗೆ ಪ್ರಧಾನಿ ಅವರ ಯೋಜನೆಗಳು ಹಾಗೂ ಭವಿಷ್ಯ ನಿರ್ಮಾಣದ ಬಗ್ಗೆ ತಿಳಿಸಿಕೊಡುವ ಪ್ರಯತ್ನ ಈ ಅಭಿಯಾನದ ಮುಖ್ಯ ಉದ್ಧೇಶ’ ಎಂದರು.

ಮೇಯರ್‌ ಶೋಭಾ ಸೋಮನಾಚೆ, ಉಪಮೇಯರ್‌ ರೇಶ್ಮಾ ಪಾಟೀಲ, ವಿಕಾಸಿತ ಭಾರತ ಸಂಕಲ್ಪ ಯಾತ್ರೆಯ ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲಾ ಪ್ರಭಾರಿ ವಿನೋಧ ಸೇಷನ್, ಜಿಲ್ಲಾ ಅಗ್ರಣಿ ಬ್ಯಾಂಕ್ ವ್ಯವಸ್ಥಾಪಕ ಪಿ.ಆರ್. ಕುಲಕರ್ಣಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ