Breaking News

60 ವರ್ಷ ಮೇಲ್ಪಟ್ಟವರು, ಹೃದಯ ಸಮಸ್ಯೆ ಇರುವವರಿಗೆ ಮಾಸ್ಕ್​ ಕಡ್ಡಾಯ..

Spread the love

ಬೆಂಗಳೂರು: ಕೇರಳದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಈ ಬಗ್ಗೆ ಕಟ್ಟೆಚ್ಚರ ವಹಿಸಲಾಗಿದೆ. ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್ ನೇತೃತ್ವದಲ್ಲಿ ಉನ್ನತಾಧಿಕಾರಿಗಳ ಸಭೆ ನಡೆಸಿ ರಾಜ್ಯದ ಆಸ್ಪತ್ರೆಗಳಲ್ಲಿ ಹೆಚ್ಚು ಕೊರೊನಾ ಪರೀಕ್ಷೆಗಳನ್ನು ನಡೆಸಲು ತೀರ್ಮಾನಿಸಲಾಗಿದೆ. ಇದೇ ವೇಳೆ 60 ವರ್ಷ ಮೇಲ್ಪಟ್ಟವರು ಹಾಗೂ ಹೃದಯ ಸಂಬಂಧಿ ಸಮಸ್ಯೆ ಹೊಂದಿರುವವರಿಗೆ ಮಾಸ್ಕ್​ ಕಡ್ಡಾಯ ಮಾಡಬೇಕು ಎಂದು ತಜ್ಞರ ಸಮಿತಿ ಸಲಹೆ ನೀಡಿದೆ. ಈ ಸಲಹೆಗಳನ್ನು ಪರಿಶೀಲಿಸಿ ಅಧಿಸೂಚನೆ ಹೊರಡಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್​ ಹೇಳಿದ್ದಾರೆ.

ರಾಜ್ಯದ ಆಸ್ಪತ್ರೆಗಳಲ್ಲಿ ಕೊರೊನಾ ಸೋಂಕು ಪ್ರಕರಣಗಳ ಪರೀಕ್ಷೆ ನಡೆಸಿ ಸೋಂಕು ಹೆಚ್ಚಾದರೆ ಆಗ ಯಾವ ರೀತಿಯ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಬಗ್ಗೆ ತೀರ್ಮಾನ ಮಾಡಲಾಗುವುದು. ಮುನ್ನೆಚ್ಚರಿಕೆ ಕ್ರಮಗಳನ್ನ ತೆಗೆದುಕೊಳ್ಳುವ ನಿಟ್ಟಿನಲ್ಲಿ ಈಗಾಗಲೇ ನಾನು ಒಂದು ಸುತ್ತಿನ ಸಭೆಯನ್ನು ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ನಡೆಸಿದ್ದೇನೆ. ಅಲ್ಲದೇ ಡಾ. ರವಿ ಅವರ ನೇತೃತ್ವದ ತಾಂತ್ರಿಕ ಸಲಹಾ ಸಮಿತಿ ಕೂಡಾ ನಿನ್ನೆಯೇ ಸಭೆ ನಡೆಸಿ ಕೆಲವು ಸಲಹೆಗಳನ್ನು ನೀಡಿದ್ದಾರೆ.

ಹೆಚ್ಚು ಟೆಸ್ಟಿಂಗ್ ಮಾಡುವಂತೆ ಆರೋಗ್ಯ ಇಲಾಖೆಗೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ರಾಜ್ಯದ ಎಲ್ಲಾ ಆಸ್ಪತ್ರೆಗಳನ್ನ ಸನ್ನದ್ಧ ಸ್ಥಿತಿಯಲ್ಲಿರಲು ಸೂಚಿಸಲಾಗಿದೆ. ಅಗತ್ಯವಿರುವ ಬೆಡ್, ಪಿಪಿಇ ಕಿಟ್, ಆಗ್ನಿಜನ್ ಸನ್ನದ್ದ ಸ್ಥಿತಿಯಲ್ಲಿ ಇರಿಸಿಕೊಳ್ಳಲು ಎಲ್ಲ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ತಿಳಿಸಲಾಗಿದೆ. ಕೇರಳ ಗಡಿ ಜಿಲ್ಲೆಗಳಲ್ಲಿ ಹೆಚ್ಚು ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಶೀತ, ಜ್ವರ ಕೆಮ್ಮು ಇರುವವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಸಚಿವರು ಸೂಚನೆ ನೀಡಿದ್ದಾರೆ.

ವಸ್ತುಸ್ಥಿತಿ ಬಗ್ಗೆ ಅವಲೋಕನ : ಈಗಾಗಲೇ ಆರೋಗ್ಯ ಇಲಾಖೆಯಿಂದ ತುರ್ತು ಸಭೆ ನಡೆಸಿ ಅಗತ್ಯ ತಯಾರಿ ಮಾಡಿಕೊಳ್ಳುವ ಮತ್ತು ವಸ್ತುಸ್ಥಿತಿ ಬಗ್ಗೆ ಅವಲೋಕನ ಮಾಡಿಕೊಳ್ಳುತ್ತಿದೆ. ಒಂದು ತಿಂಗಳಿಗೆ ಟೆಸ್ಟ್ ಮಾಡಲು 3 ಲಕ್ಷ ಆರ್​ಟಿಪಿಸಿಆರ್ ಟೆಸ್ಟಿಂಗ್ ಕಿಟ್ ಅಗತ್ಯವಿದೆ. ಟೆಂಡರ್ ಕರೆದಿದ್ದು, ನಾಲ್ಕೈದು ದಿನದಲ್ಲಿ ಪೂರೈಕೆಯಾಗಲಿದೆ. ಔಷಧ, ಬೆಡ್ ವ್ಯವಸ್ಥೆ, ಆಕ್ಸಿಜನ್ ವ್ಯವಸ್ಥೆ ಮಾಡಿಕೊಳ್ಳುವುದು ಸೇರಿ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸನ್ನದ್ಧತೆ ಪರಿಶೀಲಿಸಲು ಆರೋಗ್ಯ ಇಲಾಖೆ ಸೂಚನೆ ನೀಡಿದೆ.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ