ನವದೆಹಲಿ: ಒಂದು ವೇಳೆ ಬೇರೆ ಪಕ್ಷ ಅಧಿಕಾರದಲ್ಲಿದ್ದ ವೇಳೆ ಸಂಸತ್ ಭದ್ರತಾ ಲೋಪ ನಡೆದಿದ್ದರೆ ಬಿಜೆಪಿ ಪಕ್ಷ ಇಡೀ ದೆಹಲಿಯನ್ನು ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿತ್ತು ಎಂದು ಶಿವಸೇನಾ ಸಂಸದ ಸಂಜಯ್ ರಾವತ್ ಕಿಡಿ ಕಾರಿದ್ದಾರೆ.
ಈಚೆಗೆ ಸಂಸತ್ ಭವನದಲ್ಲಿ ನಡೆದ ಭದ್ರತಾ ಲೋಪದ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿರುವ ಅವರು, “ಕೇಂದ್ರದಲ್ಲಿ ಬೇರೆ ಯಾವುದೇ ಪಕ್ಷ ಅಧಿಕಾರದಲ್ಲಿದ್ದರೆ, ಈ ವಿಷಯದ ಬಗ್ಗೆ ಬಿಜೆಪಿ ಇಡೀ ದೆಹಲಿಯನ್ನು ಬಂದ್ ಮಾಡುತ್ತಿತ್ತು.
ಕೃತ್ಯವೆಸಗಿದ ಆರೋಪಿಗಳಿಗೆ ಪಾಸ್ ನೀಡಿದ ಬಿಜೆಪಿ ಸಂಸದ ಮೇಲೆ ಯಾವ ಕ್ರಮವನ್ನೂ ಕೈಗೊಂಡಿಲ್ಲ ಎಂದು ಟೀಕಿಸಿದ ರಾವತ್, ದೇಶದ ಭದ್ರತಾ ವಿಚಾರದಲ್ಲಿ ಯಾರೂ ರಾಜಕೀಯ ಮಾಡಬಾರದು ಎಂದರು