ನವದೆಹಲಿ : ಸಿಎಂ ಸಿದ್ದರಾಮಯ್ಯ (CM Siddaramaiah) ಡಿ. 19 ಮಂಗಳವಾರದಂದು ಪ್ರಧಾನಿ ನರೇಂದ್ರ ಮೋದಿಯವರನ್ನು (PM Narendra modi) ಭೇಟಿಯಾಗಲಿದ್ದಾರೆ. ರಾಜ್ಯಕ್ಕೆ ಕೇಂದ್ರ ಬರ ಪರಿಹಾರದ ಹಣ ಬಿಡುಗಡೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರಧಾನಿಯವರೊಡನೆ ಚರ್ಚಿಸಲಿದ್ದಾರೆ.
ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಇಬ್ಬರೂ ನಿಗಮ ಮಂಡಳಿ ಅಧ್ಯಕ್ಷರ ನೇಮಕಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ವರಿಷ್ಠರ ಭೇಟಿಗಾಗಿ ದೆಹಲಿಗೆ ತೆರಳಿದ್ದು, ಇದೇ ವೇಳೆ ಸಿಎಂ ಸಿದ್ದರಾಮಯ್ಯ ಪ್ರಧಾನಿ ಭೇಟಿಗೂ ಸಮಯ ನಿಗದಿಪಡಿಸಿಕೊಂಡಿದ್ದಾರೆ.
ರಾಜ್ಯದಲ್ಲಿ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಇಲಾಖೆಗಳ ಸಹಕಾರ, ನರೇಗಾ ಯೋಜನೆಯಡಿ ಮಾನವ ದಿನಗಳ ಹೆಚ್ಚಳ ಮುಂತಾದವುಗಳ ಬಗ್ಗೆ ಸಿಎಂ ಮನವಿ ಸಲ್ಲಿಸುವ ಸಾಧ್ಯತೆಯಿದೆ.