ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿನೇ ಐದು ವರ್ಷ ಇರುತ್ತಾರೋ ಇಲ್ಲವೋ ಯಾರಿಗೆ ಗೊತ್ತು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರ ಐದು ವರ್ಷದಲ್ಲಿ ಪತನವಾಗಲಿದೆ ಎಂಬ ಹೆಚ್ಡಿ ಕುಮಾರಸ್ವಾಮಿ ಹೇಳಿಕೆಗೆ ಸಚಿವ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದ್ದಾರೆ.
ಕೊಡಗು, ಡಿಸೆಂಬರ್ 18: ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿನೇ(HD Kumaraswamy)ಐದು ವರ್ಷ ಇರುತ್ತಾರೋ ಇಲ್ಲವೋ ಯಾರಿಗೆ ಗೊತ್ತು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರ ಐದು ವರ್ಷದಲ್ಲಿ ಪತನವಾಗಲಿದೆ ಎಂಬ ಹೆಚ್ಡಿ ಕುಮಾರಸ್ವಾಮಿ ಹೇಳಿಕೆಗೆ ಅವರು ತಿರುಗೇಟು ನೀಡಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷದ ನಾಯಕರಾಗಿ ಹೆಚ್ಡಿ ಕುಮಾರಸ್ವಾಮಿ ಅವರು ಒಳ್ಳೆಯ ರೀತಿಯಲ್ಲಿ ಕೆಲಸ ಮಾಡಲಿ ಎಂದು ಕಿಡಿಕಾರಿದ್ದಾರೆ.
ನಮಗೆ ಈಗ ಅಧಿಕಾರ ಬಂದಿದೆ, ನಾವು ಅಧಿಕಾರ ನಡೆಸುತ್ತಿದ್ದೇವೆ. ಜನರು ನಮಗೆ ಬಹುಮತ ಕೊಟ್ಟಿದ್ದಾರೆ. ಸರ್ಕಾರ ಇರುವುದಿಲ್ಲ ಎಂಬ ಹೇಳಿಕೆಗಳನ್ನು ಕುಮಾರಸ್ವಾಮಿ ಅವರು ಏಕೆ ನೀಡುತ್ತಾರೆ ಎಂದು ಪ್ರಶ್ನಿಸಿದ್ದಾರೆ.