Breaking News

ಭ್ರೂಣ ಹತ್ಯೆ: ಸುಳಿವು ಕೊಟ್ಟರೆ 1 ಲಕ್ಷ ರೂ. ನಗದು ಬಹುಮಾನ; ಆರೋಗ್ಯ ಇಲಾಖೆ ಘೋಷಣೆ

Spread the love

ರಾಜ್ಯದಲ್ಲಿ ಭ್ರೂಣ ಹತ್ಯೆಯನ್ನು ಸಂಪೂರ್ಣವಾಗಿ ತಡೆಗಟ್ಟಲು ಮುಂದಾಗಿರುವ ಆರೋಗ್ಯ ಇಲಾಖೆ ಭ್ರೂಣ ಹತ್ಯೆ ಸುಳಿವು ನೀಡಿದವರಿಗೆ ರೂ. 1 ಲಕ್ಷ ನಗದು ಬಹುಮಾನ ನೀಡುವುದಾಗಿ ಘೋಷಿಸಿದೆ. ಇದಲ್ಲದೇ ಸುಳಿವು ನೀಡುವವರ ಹೆಸರನ್ನು ಗೌಪ್ಯವಾಗಿಡಲಾಗುವುದು ಎಂದು ತಿಳಿಸಿದೆ. ಬೆಂಗಳೂರು: ರಾಜ್ಯದಲ್ಲಿ ಭ್ರೂಣ ಹತ್ಯೆಯನ್ನು ಸಂಪೂರ್ಣವಾಗಿ ತಡೆಗಟ್ಟಲು ಮುಂದಾಗಿರುವ ಆರೋಗ್ಯ ಇಲಾಖೆ ಭ್ರೂಣ ಹತ್ಯೆ ಸುಳಿವು ನೀಡಿದವರಿಗೆ ರೂ. 1 ಲಕ್ಷ ನಗದು ಬಹುಮಾನ ನೀಡುವುದಾಗಿ ಘೋಷಿಸಿದೆ. ಇದಲ್ಲದೇ ಸುಳಿವು ನೀಡುವವರ ಹೆಸರನ್ನು ಗೌಪ್ಯವಾಗಿಡಲಾಗುವುದು ಎಂದು ತಿಳಿಸಿದೆ.
ರಾಜ್ಯದ ಯಾವುದೇ ಭಾಗದ ಆಸ್ಪತ್ರೆಯಲ್ಲಿ ಭ್ರೂಣ ಲಿಂಗ ಪತ್ತೆ ನಡೆಯುತ್ತಿರುವ ಬಗ್ಗೆ ಸಾರ್ವಜನಿಕರು ಸ್ಪಷ್ಟವಾಗಿ ಆರೋಗ್ಯ ಇಲಾಖೆಗೆ ಮಾಹಿತಿ ನೀಡಿದವರಿಗೆ ಒಂದು ಲಕ್ಷಣ ರೂಪಾಯಿ ಬಹುಮಾನ ಹಣ ನೀಡುತ್ತೇವೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಸಾರ್ವಜನಿಕರ ಸಹಾಯಕ್ಕಾಗಿ ಆರೋಗ್ಯ ಇಲಾಖೆ ಸಹಾಯವಾಣಿ ತೆರೆದಿದ್ದು, 080-25202264/65ಗೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದು ತಿಳಿಸಿದೆ. ಹೆಣ್ಣು ಭ್ರೂಣ ಹತ್ಯೆ ತಡೆಗೆ ರಾಜ್ಯ ಸರ್ಕಾರ ಕಾನೂನು ತಿದ್ದುಪಡಿ, ರಾಜ್ಯಮಟ್ಟದ ಕಾರ್ಯಪಡೆ ರಚನೆ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಲಿಂಗ ಪತ್ತೆ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸಚಿವರು, ಕಳೆದ ವರ್ಷ 1,000 ಪುರುಷರಿಗೆ 947 ಮಹಿಳೆಯರಿದ್ದರು. ಈ ವರ್ಷ 929 ಇದ್ದಾರೆ. ಮಹಿಳೆಯರ ಸಂಖ್ಯೆ ಕಡಿಮೆಯಾಗಿದೆ ಎಂದರು.

Spread the love

About Laxminews 24x7

Check Also

ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ ಪಾರದರ್ಶಕವಾಗಲು ಕ್ರಮಕೈಗೊಳ್ಳಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

Spread the love ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ ಪಾರದರ್ಶಕವಾಗಲು ಕ್ರಮಕೈಗೊಳ್ಳಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ಕಲಬುರಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ