ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಚಿತ್ರದ ಮೂಲಕ ಸರ್ಕಾರಿ ಶಾಲೆಗಳ ಉಳಿವಿನ ಬಗ್ಗೆ ಜಾಗೃತಿ ಮೂಡಿಸಿದ್ದ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು, ಕೇವಲ ಸಿನಿಮಾದಲ್ಲಿ ಮಾತ್ರವಲ್ಲದೆ ನಿಜಜೀವನದಲ್ಲಿ ಕನ್ನಡ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಕುಂದಾಪುರ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಚಿತ್ರದ ಮೂಲಕ ಸರ್ಕಾರಿ ಶಾಲೆಗಳ ಉಳಿವಿನ ಬಗ್ಗೆ ಜಾಗೃತಿ ಮೂಡಿಸಿದ್ದ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು, ಕೇವಲ ಸಿನಿಮಾದಲ್ಲಿ ಮಾತ್ರವಲ್ಲದೆ ನಿಜಜೀವನದಲ್ಲಿ ಕನ್ನಡ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ.
ಇದಕ್ಕೆ ಪೂರಕವೆಂಬಂತೆ ತಾವು ಓದಿದ್ದ ಕೆರಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ದತ್ತು ಪಡೆದುಕೊಂಡಿದ್ದಾರೆ. ಇತ್ತೀಚಿಗೆ ಕೆರಾಡಿಗೆ ಭೇಟಿ ನೀಡಿದ್ದ ಅವರು, ಸರ್ಕಾರಿ ಶಾಲೆಗಳನ್ನು ಉಳಿಸುವ ಮತ್ತು ಬೆಳೆಸುವ ಬಗ್ಗೆ ಮಾತನಾಡಿದ್ದರು. ಈ ವೇಳೆ ಗ್ರಾಮದ ಪ್ರಮುಖರು ರಿಷಭ್ ಶೆಟ್ಟಿ ಅವರನ್ನು ಅಭಿನಂದಿಸಿ ಶುಭಹಾರೈಸಿದ್ದಾರೆ. ಭಾನುವಾರ ನಡೆದ ಎಸ್ಡಿಎಂಸಿ ಸಭೆಯಲ್ಲಿ ರಿಷಬ್ ಶೆಟ್ಟಿ ಅವರು, ಶಾಲೆಯನ್ನು ದತ್ತು ತೆಗೆದುಕೊಳ್ಳುವ ನಿರ್ಧಾರವನ್ನು ಪ್ರಕಟಿಸಿದರು
Laxmi News 24×7