Breaking News
Home / ಜಿಲ್ಲೆ / ಬೆಳಗಾವಿ / ಚಿಕ್ಕೋಡಿ / ವಿದ್ಯುತ್​ ಕಡಿತ ರಾಯಬಾಗ ಪಟ್ಟಣದ ಸಮುದಾಯ ಆಸ್ಪತ್ರೆಯಲ್ಲಿ ಪರದಾಡಿದ್ ರೋಗಿಗಳು

ವಿದ್ಯುತ್​ ಕಡಿತ ರಾಯಬಾಗ ಪಟ್ಟಣದ ಸಮುದಾಯ ಆಸ್ಪತ್ರೆಯಲ್ಲಿ ಪರದಾಡಿದ್ ರೋಗಿಗಳು

Spread the love

ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದ ಸಮುದಾಯ ಆಸ್ಪತ್ರೆಯಲ್ಲಿ ವಿದ್ಯುತ್ ಇಲ್ಲದೆ ಒಳರೋಗಿಗಳು ಕೆಲ ಕಾಲ ಪರದಾಡಿರುವ ಘಟನೆ ನಡೆದಿದೆ. ಸೋಮವಾರ ರಾತ್ರಿ 10 ಗಂಟೆ ಆಸುಪಾಸಿನಲ್ಲಿ ವಿದ್ಯುತ್ ಕಡಿತಗೊಂಡ ಕಾರಣ ಆಸ್ಪತ್ರೆಯಲ್ಲಿದ್ದ ಒಳರೋಗಿಗಳು ಪರದಾಡುವಂತಾಗಿತ್ತು.

ಸೋಮವಾರ ರಾತ್ರಿ 10 ಗಂಟೆ ಆಸುಪಾಸಿನಲ್ಲಿ ವಿದ್ಯುತ್ ಕಡಿತಗೊಂಡ ಕಾರಣ ಆಸ್ಪತ್ರೆಯಲ್ಲಿದ್ದ ಒಳರೋಗಿಗಳು ಪರದಾಡುವಂತಾಗಿತ್ತು. ಇದರಿಂದ ಆಸ್ಪತ್ರೆಯಲ್ಲಿ ಕತ್ತಲುಮಯ ವಾತಾವರಣ ನಿರ್ಮಾಣವಾಗಿ ರೋಗಿಗಳಲ್ಲಿ ಆತಂಕಕ್ಕೆ ಕಾರಣವಾಗಿತ್ತು. ಈ ಬಗ್ಗೆ ರೋಗಿಗಳು ಮತ್ತು ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಸ್ಪತ್ರೆಯಲ್ಲಿ ಕರೆಂಟ್ ಇಲ್ಲದೆ ಭಯದ ವಾತಾವರಣ ನಿರ್ಮಾಣವಾಗಿದೆ, ಜನರೇಟರ್ ಇದ್ದರೂ ಕೂಡ ಸಿಬ್ಬಂದಿ ಚಾಲನೆ ಮಾಡುತ್ತಿಲ್ಲ, ಮತ್ತು ಆರು ಗಂಟೆಯಿಂದ ವೈದ್ಯರನ್ನು ಹಿಡಿದು ಆಸ್ಪತ್ರೆಯ ಸಿಬ್ಬಂದಿಗಳು ಇಲ್ಲಿ ಕಾಣುತ್ತಿಲ್ಲ ಎಂದು ಆರೋಪಿಸಿ, ನಮಗೆ ತುಂಬಾ ಭಯವಾಗುತ್ತಿದೆ, ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಬೇಕು, ಏನಾದರೂ ಹೆಚ್ಚು ಕಡಿಮೆಯಾದರೆ ಯಾರು ಜವಾಬ್ದಾರಿ ಎಂದು ಒಳ ರೋಗಿ ಸಂಬಂಧಿಕರಾದ ಪರಸಪ್ಪ ಎಂಬುವರು ಕಳವಳ ವ್ಯಕ್ತಪಡಿಸಿದ್ದಾರೆ.

ವಿಷಯಕ್ಕೆ ಸಂಬಂಧಿಸಿದಂತೆ ರಾಯಬಾಗ್ ವೈದ್ಯಾಧಿಕಾರಿ ಶಿವನಗೌಡ ಎಂ ಪಾಟೀಲ್ ಈಟಿವಿ ಭಾರತ ಜೊತೆ ದೂರವಾಣಿ ಮುಖಾಂತರ ಮಾತನಾಡಿ, ನಿನ್ನೆ ಆಸ್ಪತ್ರೆಯಲ್ಲಿ ವಿದ್ಯುತ್ ಕಡಿತವಾಗಿದ್ದರಿಂದ, ಸಮಸ್ಯೆ ಉದ್ಭವವಾಗಿದೆ. 10 ನಿಮಿಷ ಮಾತ್ರ ವಿದ್ಯುತ್ ಕಡಿತಗೊಂಡಿತ್ತು. ಸಮಯಕ್ಕೆ ಸರಿಯಾಗಿ ಜನರೇಟರ್ ಪ್ರಾರಂಭವಾಗದೆ ಇರುವುದಕ್ಕೆ ಈ ಸಮಸ್ಯೆ ಉದ್ಭವವಾಗಿದೆ, ನಾನು ಕೂಡ ಈಗಾಗಲೇ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಮೇಲಧಿಕಾರಿಗಳಿಗೆ ವರದಿ ಸಲ್ಲಿಸುತ್ತಿದ್ದೇನೆ, ಈ ಲೋಪಕ್ಕೆ ಯಾರೇ ಕಾರಣ ಆಗಿದ್ದರೂ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದೆಂದು ಹೇಳಿದ್ದಾರೆ.


Spread the love

About Laxminews 24x7

Check Also

ಕುಗ ನೊಳಿ ಚೆಕ್ ಪೋಸ್ಟ್ ನಲ್ಲಿ 14ಲಕ್ಷ್ ರೂಪಾಯಿ ನಗ ದು ಪ ತ್ತೆ

Spread the loveಚಿಕ್ಕೋಡಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ನಿಪ್ಪಾಣಿ ತಾಲೂಕಿನ ಕೊಗನೋಳ್ಳಿ ಚೆಕ್ ಪೋಸ್ಟನಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದ್ದು, ದಿನದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ