ಬೆಂಗಳೂರು,ಡಿಸೆಂಬರ್ 19: 2023 ರ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡು ಆರು ತಿಂಗಳ ಬಳಿಕ ಬಿಜೆಪಿ ಹೈಕಮಾಂಡ್ ವಿಜಯೇಂದ್ರ ಅವರನ್ನ ಆಯ್ಕೆ ಮಾಡಿರುವುದು ಬಿಜೆಪಿಗೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಿಸಿ ತುಪ್ಪದಂತಾಗಿದ್ದಾರೆ.
ಹೌದು, ಕರ್ನಾಟಕ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕ ಸ್ಥಾನದ ಮೇಲೆ ಕಣ್ಣೀಟ್ಟಿದ ಯತ್ನಾಳ್ ಗೆ ಈ ಎರಡು ಸ್ಥಾನಗಳು ಕೈ ತಪ್ಪಿದ ಬಳಿಕ ಸ್ವಪಕ್ಷದ ನಾಯಕರಾದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರ ವಿರುದ್ದ ಬಹಿರಂಗವಾಗಿ ಟೀಕೆ ಮಾಡುವ ಮೂಲಕ ಪಕ್ಷಕ್ಕೆ ಮುಜುಗರ ತಂದಿದ್ದಾರೆ.
ಯತ್ನಾಳ್ ಅವರ ಸ್ವಪಕ್ಷ ನಾಯಕರಿಗೆ ನೇರವಾಗಿ ಕಿಡಿಕಾರಿದ್ದು, ಆಡಳಿತರೂಢ ಕಾಂಗ್ರೆಸ್ ಅಸ್ತ್ರವಾಗಿದೆ.
ರಾಜ್ಯದಲ್ಲಿ ಸರಿಯಾದ ಸ್ಥಾನ ಮಾನ ಸಿಗದ ಕಾರಣ ಬಂಡಾಯ ಎದ್ದಿರುವ ಬಸವನಗೌಡ ಪಾಟೀಲ್ ಯತ್ನಾಳ್ ಅವರನ್ನ ಲೋಕಸಭಾ ಚುನಾವಣೆಯಲ್ಲಿ ಕಣಕ್ಕಿಳಿಸಲು ಬಿಜೆಪಿ ಹೈಕಮಾಂಡ್ ಚಿಂತನೆ ನಡೆಸಿದೆ ಎನ್ನಲಾಗಿದೆ. ಈಗಾಗಲೇ ರಾಜ್ಯ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕನ ಆಯ್ಕೆಯಾಗಿದ್ದು, ಯತ್ನಾಳ್ ಅವರನ್ನ ಸೈಲೆಂಟ್ ಮಾಡಲು ಬಿಜೆಪಿ ಹೈಕಮಾಂಡ್ ರಾಷ್ಟ್ರ ರಾಜಕಾರಣಕ್ಕೆ ಕರೆತರಲು ಮುಂದಾಗಿದೆ.
ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ಟಿಕೆಟ್ ನೀಡುವ ಮೂಲಕ ಅವರ ಅಸಮಾಧಾನವನ್ನ ಶಮನಗೊಳಿಸಲು ಬಿಜೆಪಿ ಹೈಕಮಾಂಡ್ ಯೋಜಿಸಿದೆ ಎನ್ನುವ ಮಾತುಗಳು ಕೂಡ ರಾಜಕೀಯ ವಲಯದಲ್ಲಿ ಕೇಳಿಬಂದಿವೆ. ಈಗಾಗಲೇ 2023 ರ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನ ಗೆದ್ದಿರುವ ಕಾಂಗ್ರೆಸ್, ಮುಂದಿನ ಲೋಕಸಭಾ ಚುನಾವಣೆಯನ್ನ ಗೆಲ್ಲುವ ನಿಟ್ಟಿನಲ್ಲಿ ಭರ್ಜರಿ ಸಿದ್ದತೆ ನಡೆಸಿದ್ದು, ಇತ್ತ ಕಾಂಗ್ರೆಸ್ ಗೆ ಠಕ್ಕರ್ ಕೊಡಲು ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮೂಲಕ ಗೆಲ್ಲುವಿನ ಲೆಕ್ಕಾಚಾರವನ್ನ ಹಾಕಿಕೊಂಡಿದೆ.
ಇತ್ತ ಬಿಜೆಪಿ ಹೈಕಮಾಂಡ್ ಒಂದೇ ಕಲ್ಲಿನಿಂದ ಎರಡು ಹಕ್ಕಿಗಳನ್ನ ಹೊಡೆಯುವ ನಿಟ್ಟಿನಲ್ಲಿ ಪ್ಲಾನ್ ನಡೆಸಿದೆ. ಯತ್ನಾಳ್ ಅವರ ಅಸಮಾಧಾನವನ್ನ ಶಮನಗೊಳಿಸಲು ಲೋಕಸಭಾ ಚುನಾವಣೆಗೆ ಕಣಕ್ಕಿಸುವ ತಂತ್ರಗಾರಿಕೆಯನ್ನ ನಡೆಸಿದ್ದು, ಅಭ್ಯರ್ಥಿಗಳ ಕೊರತೆ ಇರುವ ಕ್ಷೇತ್ರದಲ್ಲಿ ಹಿಂದು ಹುಲಿ ಯತ್ನಾಳ್ ಅವರನ್ನ ಕಣಕ್ಕಿಳಿಸಲು ಮಾಸ್ಟರ್ ಪ್ಲಾನ್ ಅನ್ನು ಬಿಜೆಪಿ ಹೈಕಮಾಂಡ್ ಹಾಕಿಕೊಂಡಿದೆ.