Breaking News

ಆರ್.ಆರ್. ನಗರದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಹೊಂದಾಣಿಕೆ ಮಾಡಿಕೊಂಡಂತೆ ಕಾಣಿಸುತ್ತದೆ.‌ ವೀಕ್ ಕ್ಯಾಂಡಿಡೇಟ್ ಹಾಕಿದ್ದಾರೆ : ಸಿದ್ದರಾಮಯ್ಯ

Spread the love

ಬಾಗಲಕೋಟೆ : ಆರ್.ಆರ್.ನಗರ, ಶಿರಾ ಕ್ಷೇತ್ರದಲ್ಲಿ ನಾವು ಸೋತಿದ್ದೇವೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸೋಲು ಗೆಲುವು ಸಾಮಾನ್ಯ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಬದಾಮಿಯಲ್ಲಿ ಮಾತನಾಡಿದ ಅವರು, ಶಿರಾ ಕ್ಷೇತ್ರದಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಗೆಲ್ಲುವ ನಿರೀಕ್ಷೆಯಿತ್ತು. ಜೊತೆಗೆ, ಆರ್, ಆರ್ ನಗರದಲ್ಲಿ ಒಳ್ಳೆಯ ಫೈಟ್​ ಕೊಡ್ತೇವೆಂದು ಕೊಂಡಿದ್ದೆವು. ಆದರೆ, ಜನರ ತೀರ್ಪನ್ನು ನಾವು ಒಪ್ಪಿಕೊಂಡಿದ್ದೇವೆ ಎಂದಿದ್ದಾರೆ.

ಸರ್ಕಾರದಲ್ಲಿ ಇರುವವರು ಚುನಾವಣೆ ನಿಷ್ಪಕ್ಷಪಾತ, ಮುಕ್ತವಾಗಿ ನಡೆಸಬೇಕು. ಅದು ಅವರ ಜವಾಬ್ದಾರಿ. ನನಗೆ ಇರುವ ಮಾಹಿತಿ ಪ್ರಕಾರ, ಬಿಜೆಪಿ ಅಧಿಕಾರ ದುರುಪಯೋಗ ಮಾಡಿಕೊಂಡಿದೆ. ಎರಡು ಕ್ಷೇತ್ರದಲ್ಲಿ ಹಣದ ಹೊಳೆ ಹರಿಸಿದೆ. ಅಧಿಕಾರದ ದುರುಪಯೋಗ ಮತ್ತು ಹಣ ಕೆಲಸ ಮಾಡಿದೆ ಎಂದು ಆರೋಪಿಸಿದ್ದಾರೆ.

ಅಭ್ಯರ್ಥಿ ಆಯ್ಕೆಯಲ್ಲಿ ಯಾವುದೇ ಗೊಂದಲವಾಗಿಲ್ಲ. ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ ನಡೆದಿದೆ. ಆರ್.ಆರ್ ನಗರ ಅಭ್ಯರ್ಥಿ ಆಯ್ಕೆ ವಿಳಂಬವಾಯ್ತು. ವಿದ್ಯಾವಂತ ಹೆಣ್ಣುಮಗಳನ್ನ ಕಣಕ್ಕಿಳಿಸಿದ್ದೆವು‌ ಎಂದರು.

ಜೊತೆಗೆ, ಆರ್.ಆರ್. ನಗರದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಹೊಂದಾಣಿಕೆ ಮಾಡಿಕೊಂಡಂತೆ ಕಾಣಿಸುತ್ತದೆ.‌ ವೀಕ್ ಕ್ಯಾಂಡಿಡೇಟ್ ಬೇಕು ಅಂತಲೇ ಹಾಕಿದ್ದಾರೆ ಎಂದು ನನಗೆ ಅನ್ಸುತ್ತದೆ ಎಂದು ಸಹ ಹೇಳಿದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ