Breaking News

64 ವರ್ಷದ ವಿಧವಾ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

Spread the love

ಮುಂಬೈ(ಮಹಾರಾಷ್ಟ್ರ): 64 ವರ್ಷದ ವಿಧವಾ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸೆಗಿರುವ ಹೀನ ಕೃತ್ಯ ಈಶಾನ್ಯ ಮುಂಬೈನ ಟ್ರಾಂಬೆಯಲ್ಲಿ ಸೋಮವಾರ ತಡರಾತ್ರಿ ನಡೆದಿದೆ.

 

ಘಟನೆಯ ವಿವರ: ಸಂತ್ರಸ್ತೆಯ ಮಗಳು ನೀಡಿರುವ ದೂರಿನ ಆಧಾರದ ಪ್ರಕಾರ ಘಟನೆ ಕುರಿತು ಮುಂಬೈ ಪೊಲೀಸರು ಮಾಹಿತಿ ನೀಡಿದ್ದಾರೆ. “ಮಹಿಳೆಯು ಸೋಮವಾರ ರಾತ್ರಿ ಕುರ್ಲಾದ ನೆಹರು ನಗರ ಪ್ರದೇಶದ ಸಮೀಪದ ಖಂಡೋಬಾ ದೇವಸ್ಥಾನಕ್ಕೆ ಪೂಜೆ ಸಲ್ಲಿಸಲು ತೆರಳಿದ್ದರು. ಈ ವೇಳೆ ಅಲ್ಲಿದ್ದ ಅಪರಿಚಿತ ಮೂವರು ವ್ಯಕ್ತಿಗಳು ಅಪಹರಿಸಿ ಬಲವಂತವಾಗಿ ಟ್ರಾಂಬೆಯ ಥಾಣೆ ಕ್ರೀಕ್ ಬಳಿಯ ಪ್ರತ್ಯೇಕ ಸ್ಥಳಕ್ಕೆ ಕರೆದೊಯ್ದಿದ್ದಾರೆ. ಬಳಿಕ ಆಕೆಯ ಮೇಲೆ ಮೂವರು ಅತ್ಯಾಚಾರ ಎಸಗಿ, ಮುಖ, ತಲೆ ಮತ್ತು ಖಾಸಗಿ ಭಾಗ, ಕೈಕಾಲಿಗೆ ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ. ಪರಿಣಾಮ ಮಹಿಳೆ ಪ್ರಜ್ಞೆ ಕಳೆದುಕೊಂಡಿದ್ದರು. ಇದರಿಂದ ಮಹಿಳೆ ಸಾವನ್ನಪ್ಪಿದ್ದಾರೆ

ಎಂದು ಶಂಕೆ ವ್ಯಕ್ತಪಡಿಸಿದ ಆರೋಪಿಗಳು ಆಕೆಯನ್ನು ಕತ್ತಲ ನಿರ್ಜನ ಪ್ರದೇಶದಲ್ಲಿ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾರೆ. ಮಂಗಳವಾರ(ನಿನ್ನೆ) ಮುಂಜಾನೆ 5 ಗಂಟೆ ಸಮಯಕ್ಕೆ ಅಲ್ಲಿನ ಸ್ಥಳೀಯ ಮಹಿಳೆಯೊಬ್ಬರು ಸಂತ್ರಸ್ತ ಮಹಿಳೆಯನ್ನು ಬೆತ್ತಲಾಗಿ, ರಕ್ತಸ್ರಾವದಿಂದ ಒದ್ದಾಡುತ್ತಿರುವುದನ್ನು ನೋಡಿದ್ದಾರೆ. ತಕ್ಷಣವೇ ಧರಿಸಲು ಬಟ್ಟೆ ನೀಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಸಂತ್ರಸ್ತೆಯ ಮಗಳು ದೂರಿನಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ