Breaking News

ಪ್ರಧಾನ ಮಂತ್ರಿ ಉಜ್ವಲ ಯೋಜನೆ ಫಲಾನುಭವಿಗಳಿಗಷ್ಟೇ ಕೆವೈಸಿ ಕಡ್ಡಾಯ

Spread the love

ಸುರತ್ಕಲ್, ಡಿ.20: ಇಲ್ಲಿನ ಗ್ಯಾಸ್ ಏಜೆನ್ಸಿಯೊಂದರಲ್ಲಿ ಕೆವೈಸಿ ಮಾಡಿಸಿಕೊಳ್ಳಲು ನೂರಾರು ಗ್ರಾಹಕರು ಜಮಾಯಿಸಿದ್ದು, ನೂಕುನುಗ್ಗಲಿಗೆ ಏಜೆನ್ಸಿಯವರು ಹೈರಾಣಾಗಿದ್ದಾರೆ.

ಭಾರತ ಸರಕಾರದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆಯಿಂದ 2023ರ ಅಕ್ಟೋಬರ್ 18ರಂದು ಹೊರಡಿಸಲಾಗಿದ್ದ ಆದೇಶ ಪ್ರತಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದೇ ಈ ಗೊಂದಲಕ್ಕೆ ಕಾರಣ ಎಂದು ಆಹಾರ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

 

ಈ ಕುರಿತು ಕರ್ನಾಟಕ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಅಧಿಕಾರಿ ಡೇನಿಯಲ್ ವಾಸ್ ಅವರು ವಾರ್ತಾಭಾರತಿ ಜೊತೆ ಮಾತನಾಡಿ, ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ಗ್ಯಾಸ್ ಸಂಪರ್ಕ‌ ಪಡೆದುಕೊಂಡಿರುವವರಿಗೆ ಸಬ್ಸಿಡಿಯ ಹಿನ್ನೆಲೆಯಲ್ಲಿ ಎಲ್ಲರೂ ಗ್ಯಾಸ್ ಸಿಲಿಂಡರ್ ಪಡೆದುಕೊಳ್ಳುವ ಖಾತೆಗೆ ಕೆವೈಸಿ ಮಾಡಿಸುವುದು ಕಡ್ಡಾಯ. ಉಳಿದವರು ಮಾಡಿಸಬಹುದು ಆದರೆ ಕಡ್ಡಾಯವಲ್ಲ ಎಂದು ಮಾಹಿತಿ ನೀಡಿದ್ದಾರೆ.

ದೇಶದಲ್ಲಿ ಯಾವುದೇ ಕಂಪೆನಿಗಳ ಗ್ಯಾಸ್ ಸಂಪರ್ಕ ಪಡೆದುಕೊಂಡಿರುವ ಗ್ರಾಹಕರು ಕೆವೈಸಿ ಮಾಡಿಸಿಕೊಳ್ಳಬೇಕು. ಆದರೆ ಇಂತಿಷ್ಟೇ ದಿನಾಂಕದ ಒಳಗಾಗಿ‌ ಮಾಡಿಕೊಳ್ಳಬೇಕೆಂಬ ನಿರ್ಬಂಧವಿಲ್ಲ. ಆದರೆ, ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಗ್ಯಾಸ್ ಸಂಪರ್ಕ ಪಡೆದುಕೊಂಡಿರುವ ಗ್ರಾಹಕರು ತಮ್ಮ ಗ್ಯಾಸ್ ಖಾತೆಗೆ ಕೆವೈಸಿ ಮಾಡಿಸಿಕೊಳ್ಳುವುದು ಕಡ್ಡಾಯ.‌ ಆದರೆ ಯಾರಿಗೂ ಕಾಲಮಿತಿ ಅಳವಡಿಸಿಲ್ಲ ಎಂದು ಹಿಂದುಸ್ತಾನ್ ಪೆಟ್ರೋಲಿಯಂ ನ ಸೇಲ್ಸ್ ಮ್ಯಾನೇಜರ್ ರಾಹುಲ್ ಸ್ಪಷ್ಟನೆ ನೀಡಿದ್ದಾರೆ


Spread the love

About Laxminews 24x7

Check Also

ಆನ್‌ಲೈನ್ ಗೇಮಿಂಗ್ ಪ್ರಚಾರ-ನಿಯಂತ್ರಣ ಕಾಯಿದೆ ಪ್ರಶ್ನಿಸಿ ಹೈಕೋರ್ಟ್​ಗೆ ಅರ್ಜಿ: ಆ.30ಕ್ಕೆ ವಿಚಾರಣೆ

Spread the love ಬೆಂಗಳೂರು: ಹಣವನ್ನು ಪಣಕ್ಕಿಟ್ಟು ಆಡುವಂತಹ ಆನ್‌ಲೈನ್​ ಗೇಮ್​ಗಳಿಗೆ ನಿಷೇಧ ಹೇರುವುದಕ್ಕೆ ಅವಕಾಶ ಕಲ್ಪಿಸುವ ಆನ್‌ಲೈನ್ ಗೇಮಿಂಗ್ ಪ್ರಚಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ