Breaking News

ಲಕ್ಷ್ಮೀಶ ತೋಳ್ಪಾಡಿ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Spread the love

ಮಂಗಳೂರು: ಹಿರಿಯ ಚಿಂತಕ, ಲೇಖಕ, ವಾಗ್ಮಿ ಲಕ್ಷ್ಮೀಶ ತೋಳ್ಪಾಡಿ ಅವರಿಗೆ ಈ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಘೋಷಣೆಯಾಗಿದೆ. ಇವರ ‘ಮಹಾಭಾರತ ಅನುಸಂಧಾನದ ಭಾರತಯಾತ್ರೆ’ ಎಂಬ ಪ್ರಬಂಧ ಕೃತಿಗೆ ಪ್ರಶಸ್ತಿ ಸಂದಿದೆ.

 

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದವರಾದ ಲಕ್ಷ್ಮೀಶ ತೋಳ್ಪಾಡಿಯವರದ್ದು ಸಂತನಂತಹ ಬದುಕು. ಸದಾ ಆಧ್ಯಾತ್ಮಿಕ ಚಿಂತನೆ ಹೊಂದಿರುವವರು. ಜೊತೆಗೊಂದಿಷ್ಟು ಬರಹ, ಮಾತು, ಮೌನ ಎಲ್ಲವನ್ನೂ ಒಳಗಿಟ್ಟುಕೊಂಡವರು. ಇವರು ಬರೆದಿರುವ ಅನೇಕ ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಭಗವದ್ಗೀತೆಯ ಬಗೆಗಿನ ‘ಮಹಾಯುದ್ಧಕ್ಕೆ ಮುನ್ನ’ ತೋಳ್ಪಾಡಿಯವರ ಮೊದಲ ಪ್ರಕಟಿತ ಕೃತಿ.

ಅಂತರ್ಜಾಲ ಪತ್ರಿಕೆ ಕೆಂಡ ಸಂಪಿಗೆಯಲ್ಲಿ ಭಾಗವತದ ಬಗ್ಗೆ ಬರೆದ ಸರಣಿ ಬರಹಗಳ ಸಂಕಲನ ‘ಸಂಪಿಗೆ ಭಾಗವತ’ಕ್ಕೆ ಬಹಳಷ್ಟು ಮೆಚ್ಚುಗೆ ವ್ಯಕ್ತವಾಗಿತ್ತು. ಬಳಿಕ ಪುಸ್ತಕವಾಗಿಯೂ ಈ ಬರಹ ಪ್ರಕಟವಾಗಿದೆ. ಅಲ್ಲದೆ ‘ಬೆಟ್ಟ ಮಹಮದನ ಬಳಿಗೆ ಬಾರದಿದ್ದರೆ’, ‘ಭವ ತಲ್ಲಣ’ (ತಾಳಮದ್ದಲೆ ಕುರಿತು), ‘ಆನಂದಲಹರೀ’ (ಸೌಂದರ್ಯಲಹರಿಯ ಪೂರ್ವಭಾಗ), ‘ಭಕ್ತಿಯ ನೆಪದಲ್ಲಿ’ ಕೃತಿಗಳು ಪ್ರಕಟವಾಗಿವೆ. ಇವರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರೆತಿದೆ.


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ