Breaking News
Home / ರಾಜಕೀಯ / ಧಾರವಾಡದಲ್ಲಿ ಕೊರೊನಾ ವರದಿಯಾಗಿಲ್ಲ, ಸಾರ್ವಜನಿಕರು ಮುಂಜಾಗ್ರತೆ ವಹಿಸಿ: ಜಿಲ್ಲಾಧಿಕಾರಿ

ಧಾರವಾಡದಲ್ಲಿ ಕೊರೊನಾ ವರದಿಯಾಗಿಲ್ಲ, ಸಾರ್ವಜನಿಕರು ಮುಂಜಾಗ್ರತೆ ವಹಿಸಿ: ಜಿಲ್ಲಾಧಿಕಾರಿ

Spread the love

ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಯಾವುದೇ ಸ್ವರೂಪದ ಕೊರೊನಾ ಪ್ರಕರಣಗಳು ವರದಿಯಾಗಿಲ್ಲ.

ಸಾರ್ವಜನಿಕರು ಕೊರೊನಾ ಬಗ್ಗೆ ಗಾಬರಿಪಡದೇ ಆರೋಗ್ಯ ಸುರಕ್ಷತೆಗಾಗಿ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಕೋವಿಡ್ 19 ರಾಜ್ಯ ತಾಂತ್ರಿಕ ಸಲಹಾ ಸಮಿತಿಯು ಕೋವಿಡ್ 19 ರ ಅಂಕಿಅಂಶಗಳು, ಕೇರಳದಲ್ಲಿನ ಕೋವಿಡ್-19 ಪ್ರಕರಣಗಳ ಹೆಚ್ಚಳ, ತಮಿಳುನಾಡು ಹಾಗೂ ಕೇರಳ ರಾಜ್ಯದಲ್ಲಿ ಕೋವಿಡ್-19 ರ ಉಪತಳಿ ಜೆಎನ್.1 (JN.1) ವರದಿ, ಚಳಿಗಾಲದ ಹವಾಮಾನ, ಕ್ರಿಸ್​ಮಸ್ ಹಾಗೂ ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಹೆಚ್ಚಾಗುವ ಸಂಭವನೀಯ ಜನದಟ್ಟಣೆಯನ್ನು ಗಮನದಲ್ಲಿರಿಸಿಕೊಂಡು ಕೆಲವು ಸಲಹಾತ್ಮಕ ಮಾರ್ಗಸೂಚಿಗಳನ್ನು ಶಿಫಾರಸು ಮಾಡಿದೆ. ಈ ಅಂಶಗಳನ್ನು ಜಿಲ್ಲೆಯ ಸಾರ್ವಜನಿಕರು ಸಹ ಪಾಲಿಸುವಂತೆ ಸೂಚನೆ ನೀಡಿದ್ದಾರೆ.

  • 60 ವರ್ಷ ಹಾಗೂ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರಿಕರು, ವಿಶೇಷವಾಗಿ ಕಿಡ್ನಿ, ಹೃದಯ, ಲೀವರ್ ಮತ್ತು ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಹಾಗೂ ಗರ್ಭಿಣಿಯರು, ಎದೆ ಹಾಲುಣಿಸುವ ತಾಯಂದಿರು ಜನದಟ್ಟಣೆ, ಹೊರಾಂಗಣ ಪ್ರದೇಶಗಳಿಗೆ ತೆರಳಿದಾಗ ಮಾಸ್ಕ್ ಧರಿಸಬೇಕು.
  • ಜ್ವರ, ಕೆಮ್ಮು, ನೆಗಡಿ, ಉಸಿರಾಟದ ಸೋಂಕಿನ ಲಕ್ಷಣಗಳನ್ನು ಹೊಂದಿದವರು ತಕ್ಷಣವೇ ಅಗತ್ಯ ವೈದ್ಯಕೀಯ ಸಲಹೆ ಪಡೆಯಬೇಕು. ಮೂಗು ಹಾಗೂ ಬಾಯಿ ಮುಚ್ಚುವಂತೆ ಮಾಸ್ಕ್ ಧರಿಸಬೇಕು.
  • ಉತ್ತಮ ವೈಯಕ್ತಿಕ ಸ್ವಚ್ಚತೆ, ಆಗಾಗ್ಗೆ ಕೈಗಳನ್ನು ಸೋಪು ಹಾಗೂ ನೀರಿನಿಂದ ತೊಳೆದುಕೊಳ್ಳುವುದು, ಮುಂಗೃತೆಯ ಪಾಲನೆ ಅಗತ್ಯ.
  • ಆರೋಗ್ಯ ಸಮಸ್ಯೆಗಳು ಕಂಡುಬಂದಲ್ಲಿ ಮನೆಯಲ್ಲಿರುವುದು ಸೂಕ್ತ. ಇತರ ವ್ಯಕ್ತಿಗಳೊಂದಿಗೆ, ವಿಶೇಷವಾಗಿ ಹಿರಿಯ ನಾಗರಿಕರು, ದುರ್ಬಲರನ್ನು (Vulnerable) ಅವಶ್ಯವಿದ್ದಲ್ಲಿ ಮಾತ್ರವೇ ಭೇಟಿ ಮಾಡಬೇಕು. ಆರೋಗ್ಯ ಸಮಸ್ಯೆಗಳನ್ನು ಹೊಂದಿದವರು ಮಾಸ್ಕ್ ಧರಿಸುಬೇಕು. ಅಂತರರಾಷ್ಟ್ರೀಯ ಪ್ರಯಾಣದ ಸಂದರ್ಭದಲ್ಲಿ ಎಚ್ಚರಿಕೆಯಿಂದಿದ್ದು, ವಿಮಾನ ನಿಲ್ದಾಣದಲ್ಲಿ ಹಾಗೂ ವಿಮಾನದ ಒಳಗೆ ಮಾಸ್ಕ್ ಧರಿಸಬೇಕು ಎಂದು ಸಲಹೆ ನೀಡಿದ್ದಾರೆ.

 


Spread the love

About Laxminews 24x7

Check Also

ಪಾನಿಪುರಿ ಮಾರುವ ಜ್ಯೂನೀಯರ್ ಮೋದಿ; ಮೋದಿ ತರಾನೇ..ಆದ್ರೆ ಅಲ್ಲ!

Spread the loveನವದೆಹಲಿ: ಗುಜರಾತ್‌ನ ಪಾನಿ ಪುರಿ ಮಾರಾಟಗಾರ ಅನಿಲ್ ಭಾಯಿ ಠಕ್ಕರ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಹೋಲುವ ಹಾಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ