Breaking News

ಕುಸ್ತಿಗೆ ಕಣ್ಣೀರ ವಿದಾಯ ಹೇಳಿದ ಒಲಿಂಪಿಕ್​ ಪದಕ ವಿಜೇತೆ ಸಾಕ್ಷಿ ಮಲಿಕ್

Spread the love

ಕ್ರೀಡಾಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಗಂಭೀರ ಪ್ರಕರಣ ಎದುರಿಸುತ್ತಿರುವ ಬ್ರಿಜ್ ಭೂಷಣ್ ಶರಣ್​ ಸಿಂಗ್ ಬೆಂಬಲಿತ ಸಂಜಯ್ ಕುಮಾರ್ ಸಿಂಗ್ ಡಬ್ಲ್ಯುಎಫ್​ಐಗೆ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಬೆನ್ನಲ್ಲೇ ಕುಸ್ತಿಪಟು ಸಾಕ್ಷಿ ಮಲಿಕ್ ನಿವೃತ್ತಿ ಘೋಷಿಸಿದ್ದಾರೆ.

 

ನವದೆಹಲಿ: 2016ರರಿಯೋಒಲಿಂಪಿಕ್ಸ್‌ನಲ್ಲಿ ಕಂಚು ಗೆದ್ದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಸಾಕ್ಷಿ ಮಲಿಕ್ ಇಂದು ಕುಸ್ತಿಗೆ ನಿವೃತ್ತಿ ಘೋಷಿಸಿದರು. ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್​ಐ) ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್​ ಸಿಂಗ್ ಬೆಂಬಲಿತ ಸಂಜಯ್ ಕುಮಾರ್ ಸಿಂಗ್ ಅವರನ್ನು ಡಬ್ಲ್ಯುಎಫ್​ಐಗೆ ನೂತನ ಅಧ್ಯಕ್ಷರಾಗಿ ಗುರುವಾರ ನೇಮಕ ಮಾಡಲಾಗಿದೆ. ಈ ಬೆಳವಣಿಗೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಸಾಕ್ಷಿ, ಕುಸ್ತಿಯನ್ನು ತ್ಯಜಿಸುವುದಾಗಿ ಪತ್ರಿಕಾಗೋಷ್ಟಿಯಲ್ಲಿ ಹೇಳಿದರು.

“ನಾವು 40 ದಿನಗಳ ಕಾಲ ರಸ್ತೆಗಳಲ್ಲಿ ಮಲಗಿದ್ದೇವೆ. ದೇಶದ ಅನೇಕ ಭಾಗಗಳಿಂದ ಸಾಕಷ್ಟು ಜನ ನಮ್ಮನ್ನು ಬೆಂಬಲಿಸಲು ಬಂದಿದ್ದರು. ಬ್ರಿಜ್ ಭೂಷಣ್ ಸಿಂಗ್ ಅವರ ಉದ್ಯಮದ ಪಾಲುದಾರ ಮತ್ತು ಆಪ್ತ ಸಹಾಯಕ ಡಬ್ಲ್ಯುಎಫ್​ಐಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಹೀಗಾಗಿ ನಾನು ಕುಸ್ತಿಯನ್ನು ತ್ಯಜಿಸುತ್ತಿದ್ದೇನೆ” ಎಂದು ಹೇಳುತ್ತಾ ಕಣ್ಣೀರಿಟ್ಟರು.

ಕಳೆದ ಏಪ್ರಿಲ್​ನಲ್ಲಿ ಹಿಂದಿನ ಡಬ್ಲ್ಯುಎಫ್​ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್​ ಸಿಂಗ್​ ವಿರುದ್ಧ ಗಂಭೀರ ಸ್ವರೂಪದ ಲೈಂಗಿಕ ಕಿರುಕುಳ ಆರೋಪಗಳು ಕೇಳಿಬಂದ ನಂತರ ದೊಡ್ಡ ಮಟ್ಟದಲ್ಲಿ ಪ್ರತಿಭಟನೆಗಳು ನಡೆದಿದ್ದವು. ಕುಸ್ತಿಪಟುಗಳಾದ ಬಜರಂಗ್​ ಪುನಿಯಾ, ವಿನೇಶ್​ ಪೋಗಟ್​ ಮತ್ತು ಸಾಕ್ಷಿ ಮಲಿಕ್ ಸೇರಿದಂತೆ ಆನೇಕರು ದೆಹಲಿಯ ಜಂತರ್​ ಮಂತರ್​ನಲ್ಲಿ ಪ್ರತಿಭಟನೆ ನಡೆಸಿದ್ದರು.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ