Breaking News

ಜನವರಿ 26ರಂದು ಫ್ಯಾನ್ಸ್​ಗಾಗಿ ಏನೋ ಪ್ಲಾನ್​ ಮಾಡ್ತಾರಂತೆ ರಕ್ಷಿತ್​ ಶೆಟ್ಟಿ

Spread the love

ನವರಿ 26ರಂದು ‘ಬ್ಯಾಚುಲರ್ ಪಾರ್ಟಿ’ ಚಿತ್ರತಂಡದಿಂದ ಹೊಸ ಅಪ್​ಡೇಟ್​ ಹೊರಬೀಳಲಿದೆ. ಈ ಬಗ್ಗೆ ನಿರ್ಮಾಣ ಸಂಸ್ಥೆ ಪರಂವಃ ಸ್ಟುಡಿಯೋ ಮಾಹಿತಿ ನೀಡಿದೆ.

7 ವರ್ಷಗಳ ಹಿಂದೆ ಕನ್ನಡದಲ್ಲಿ ಬ್ಲಾಕ್​ಬಸ್ಟರ್​ ಹಿಟ್​ ಪಡೆದು, ಇತರೆ ಭಾಷೆಗಳಿಗೂ ಡಬ್​ ಆಗಿ ಮೆಚ್ಚುಗೆ ಪಡೆದ ಸಿನಿಮಾ ‘ಕಿರಿಕ್​ ಪಾರ್ಟಿ’.

ಈ ಭರ್ಜರಿ ಯಶಸ್ಸಿನ ಬಳಿಕ ಇಡೀ ತಂಡ ಬೇರೆ ಬೇರೆ ಪ್ರಾಜೆಕ್ಟ್‌ಗಳಲ್ಲಿ ತೊಡಗಿಸಿಕೊಂಡಿದೆ. ರಿಷಬ್​ ಶೆಟ್ಟಿ ನಿರ್ದೇಶಿಸಿ, ರಕ್ಷಿತ್​ ಶೆಟ್ಟಿ ನಟಿಸಿ, ನಿರ್ಮಿಸಿರುವ ಆ ರೀತಿಯ ಯೂಥ್ ಕಾಮಿಡಿ ಸಿನಿಮಾ ಮತ್ತೊಂದು ಬರಲಿಲ್ಲವಲ್ಲ ಎಂಬ ಕೊರಗು ನೀಗಿಸಲು ಮತ್ತದೇ ಬರಹಗಾರರ ತಂಡ ಸಜ್ಜಾಗಿದೆ. ಅವರೀಗ ‘ಬ್ಯಾಚುಲರ್ ಪಾರ್ಟಿ’ಗೆ ಅಣಿಯಾಗಿದ್ದಾರೆ ಎಂಬುದು ವಿಶೇಷ.

ಕೆಲವು ದಿನಗಳ ಹಿಂದೆ ‘ಬ್ಯಾಚುಲರ್ ಪಾರ್ಟಿ’ಯ ಮೊದಲ ಝಲಕ್ ಅನ್ನು ಚಿತ್ರತಂಡ ಬಿಡುಗಡೆಗೊಳಿಸಿತ್ತು. ಇದೀಗ ಮತ್ತೊಂದು ಅಪ್​ಡೇಟ್​ ಹೊರಬಿದ್ದಿದೆ. 2024ರ ಜನವರಿ 26 ಗಣರಾಜ್ಯೋತ್ಸವ ದಿನದಂದು ಫ್ಯಾನ್ಸ್​ಗೆ ಪಾರ್ಟಿ​ ನೀಡಲು ತಂಡ ಮುಂದಾಗಿದೆ. ನಿರ್ಮಾಣ ಸಂಸ್ಥೆ ಪರಂವಃ ಸ್ಟುಡಿಯೋ ಸೋಷಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ‘ಜನವರಿ 26 ಲಾಂಗ್ ವೀಕೆಂಡ್! ನಿಮ್ದೇನ್ ಪ್ಲಾನ್? ನೀವು ಯಾವುದೇ ಪ್ಲಾನ್​ ಮಾಡಿಕೊಂಡಿಲ್ಲ ಅಂತಿದ್ರೆ, ನಿಮಗಾಗಿ ನಾವೇನಾದರೂ ಪ್ಲಾನ್​ ಮಾಡಬಹುದೇ’ ಎಂದು ಅಭಿಮಾನಿಗಳಲ್ಲಿ ಪ್ರಶ್ನಿಸಿದೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ