Breaking News

ಮಹಾನಗರ ಪಾಲಿಕೆ ಬಾಕಿ ತೆರಿಗೆ ಸಂಗ್ರಹಕ್ಕೆ ಒನ್ ಟೈಂ ಸೆಟಲ್‌ಮೆಂಟ್​ ಅವಧಿ ವಿಸ್ತರಣೆ

Spread the love

ಬೆಂಗಳೂರು, ಡಿಸೆಂಬರ್​ 21: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಬಾಕಿ ತೆರಿಗೆ ಸಂಗ್ರಹಕ್ಕೆ ಒನ್ ಟೈಂ ಸೆಟಲ್‌ಮೆಂಟ್​ ಅವಧಿ ವಿಸ್ತರಣೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ.

ವಿಧಾನಸೌಧದಲ್ಲಿ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್​ಕೆ ಪಾಟೀಲ್(HK Patil), 2024ರ ಜೂನ್ 30ರವರೆಗೆ ಒನ್ ಟೈಂ ಸೆಟಲ್‌ಮೆಂಟ್ ಅವಧಿ ವಿಸ್ತರಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ನೀರಿನ ಕರ ದರ ಇನ್ನು ಮುಂದೆ ವಾರ್ಷಿಕ ಹಣದುಬ್ಬರ ಸೂಚ್ಯಂಕಕ್ಕೆ ಸಂವಾದಿಯಾಗಿ ಹೆಚ್ಚಳ ಮಾಡುವ ಷರತ್ತಿನೊಂದಿಗೆ ನೀರಿನ ಕರ ವಿಧಿಸುವಿಕೆ ನಿಯಮಕ್ಕೆ ತಿದ್ದುಪಡಿ ಮಾಡಲಾಗಿದೆ. ಪ್ರತಿ ಎಂಸಿಎಫ್​ಟಿ ನೀರಿಗೆ ಮೂರು ಲಕ್ಷ ರೂಪಾಯಿ ರಾಜಧನ ನಿಗದಿ ಮಾಡಲಾಗಿದೆ. ಈ ಹಿಂದೆ ಎಂಸಿಎಫ್​ಟಿಗೆ ಒಂದು ಲಕ್ಷ ರೂ. ಗೂ ಕಡಿಮೆ ರಾಜಧನ ನಿಗದಿಯಾಗಿತ್ತು.

 

ಕಾಲುವೆ, ಕೆರೆ, ಜಲಾಶಯಗಳಿಂದ ಒದಗಿಸುವ ನೀರಿಗೆ ಪ್ರತಿ‌ ಎಂಸಿ‌ಎಫ್​ಟಿ ಗೆ 3 ಲಕ್ಷ ರೂ. ರಾಜಧನ, ನೈಸರ್ಗಿಕ ಜಲಮಾರ್ಗ, ನದಿ, ಹಳ್ಳಗಳಿಂದ ಪ್ರತಿ ಎಸಿಎಫ್​ಟಿ ಗೆ 1.50 ಲಕ್ಷ ರೂ. ರಾಜಧನ ನಿಗದಿಗೊಳಿಸಲಾಗಿದೆ.

ಎಡಿಬಿ ಯೋಜನೆಯಡಿ ಮಂಗಳೂರು ನಗರದಲ್ಲಿ 24/7 ನೀರು ಸರಬರಾಜು ಕಾಮಗಾರಿಯಲ್ಲಿ ಹೊಸದಾಗಿ 125 ಎಂಎಲ್​ಡಿ ನೀರು ಶುದ್ದೀಕರಣ ಘಟಕ 127.70 ಕೋಟಿ‌ ರೂ. ವೆಚ್ಚದಲ್ಲಿ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ.


Spread the love

About Laxminews 24x7

Check Also

ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಇಲ್ಲಿನ ತಾಲೂಕು ಆಡಳಿತಗಳು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿವೆ.

Spread the loveಶಿವಮೊಗ್ಗ/ಉತ್ತರಕನ್ನಡ: ರಾಜ್ಯದ ಮಲೆನಾಡು ಭಾಗದ ಹಲವೆಡೆ ಮತ್ತೆ ಮಳೆಯ ಆರ್ಭಟ ಮುಂದುವರೆದಿದೆ. ಭಾರಿ ವರ್ಷಧಾರೆ ಹಿನ್ನೆಲೆಯಲ್ಲಿ ಶಿವಮೊಗ್ಗ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ