Breaking News
Home / ರಾಜಕೀಯ / ಕಲ್ಯಾಣ ಕರ್ನಾಟಕ ಸಾರಿಗೆ ಸಿಬ್ಬಂದಿಗೆ ಪ್ರೀಮಿಯಂ ರಹಿತ ವಿಮಾ ಯೋಜನೆ

ಕಲ್ಯಾಣ ಕರ್ನಾಟಕ ಸಾರಿಗೆ ಸಿಬ್ಬಂದಿಗೆ ಪ್ರೀಮಿಯಂ ರಹಿತ ವಿಮಾ ಯೋಜನೆ

Spread the love

ಬೆಂಗಳೂರು: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಗಳಿಗೆ ಪ್ರೀಮಿಯಂ ರಹಿತ ರೂ.1.20 ಕೋಟಿ ಅಪಘಾತ ಪರಿಹಾರ‌ ವಿಮಾ ಯೋಜನೆ ಜಾರಿಗೊಳಿಸಲಾಗಿದೆ.

ಪ್ರೀಮಿಯಂ ರಹಿತ ರೂ.1.20 ಕೋಟಿ ವಿಮಾ ಯೋಜನೆಗೆ ಇಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರ ಉಪಸ್ಥಿತಿಯಲ್ಲಿ ವ್ಯವಸ್ಥಾಪಕ ನಿರ್ದೇಶಕ ರಾಚಪ್ಪ, ಹಾಗೂ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಕರ್ನಾಟಕ ವಲಯ ಮುಖ್ಯಸ್ಥ ನವನೀತ್ ಕುಮಾರ್ ರವರೊಂದಿಗೆ ಒಡಂಬಡಿಕೆ ವಿನಿಮಯ ಮಾಡಿಕೊಂಡರು.

 

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಸಾರಿಗೆ ನಿಗಮದ ಸಿಬ್ಬಂದಿಗಳಲ್ಲಿ ಇತ್ತೀಚಿನ ದಿನಗಳಲ್ಲಿ ಅಪಘಾತದಿಂದಾಗಿ ಆಗುತ್ತಿರುವ ಸಾವು-ನೋವಿನ ಪ್ರಮಾಣ ಗಮನಿಸಿ, ನಿಗಮವು ನೌಕರರು ವೈಯಕ್ತಿಕ / ಕರ್ತವ್ಯ ನಿರತ ಸಮಯದಲ್ಲಿ ಅಪಘಾತದಿಂದಾಗಿ ಮೃತಪಟ್ಟಲ್ಲಿ ಅವರ ಅವಲಂಬಿತರಿಗೆ, ಅಂಗನ್ಯೂನ್ಯತೆಗೆ ಒಳಗಾದಲ್ಲಿ ಸಿಬ್ಬಂದಿಗಳಿಗೆ ಗಣನೀಯ ಮೊತ್ತದಷ್ಟು ಹಣ ದೊರೆಯುವಂತೆ ಮಾಡುವ ಉದ್ದೇಶದಿಂದ ಯೂನಿಯನ್ ಬ್ಯಾಕ್ ಆಫ್ ಇಂಡಿಯಾ ರವರೊಂದಿಗೆ Union Super Salary Account (USSA) ಯೋಜನೆಯ ಸೌಲಭ್ಯ ನೀಡಲು ಒಪ್ಪಂದ ಮಾಡಿಕೊಂಡಿದೆ. ಪ್ರೀಮಿಯಂ ರಹಿತವಾಗಿ ಈ ಯೋಜನೆಯನ್ನು ಜಾರಿಗೊಳಿಸಲು ಸಹಕರರಿಸಿದ ಯೂನಿಯನ್ ಬ್ಯಾಂಕ್ ಅವರಿಗೆ ಧನ್ಯವಾದಗಳನ್ನು ತಿಳಿಸಿದರು.

ಸದರಿ ಯೋಜನೆಯಡಿ ಯೂನಿಯನ್ ಬ್ಯಾಂಕಿನಲ್ಲಿ ವೇತನ ಪಡೆಯುತ್ತಿರುವ ನೌಕರರು ಅಪಫಾತದಲ್ಲಿ ನಿಧನರಾದಲ್ಲಿ ಅಂತಹ ನೌಕರರ ಅವಲಂಬಿತರಿಗೆ ರೂ.1.20 ಕೋಟಿಯ ಅಪಘಾತ ವಿಮೆ ಹಣ ದೊರಕಲಿದೆ.

ನೌಕರರು ಶಾಶ್ವತ ಅಂಗನ್ಯೂನ್ಯತೆ / ಭಾಗಶಃ ಶಾಶ್ವತ ಅಂಗನ್ಯೂನ್ಯತೆ ಒಳಗಾದಲ್ಲಿ ರೂ.1 ಕೋಟಿಗಳನ್ನು ಪಡೆಯಬಹುದಾಗಿದ್ದು, ಡೆಬಿಟ್ ಕಾರ್ಡ ಮೇಲೆ ರೂ.15 ಲಕ್ಷಗಳ ಅಪಘಾತ ವಿಮಾ ಸೌಲಭ್ಯವನ್ನು ಜಾರಿ ಮಾಡಲಾಗಿರುತ್ತದೆ. ಯೋಜನೆಯಡಿ ಅಪಘಾತವಲ್ಲದ ಸ್ವಾಭಾವಿಕ ಮರಣಕ್ಕೆ ರೂ.5 ಲಕ್ಷಗಳು ವಿಮೆದೊಂದಿಗೆ ಇತರೆ ಹೆಚ್ಚುವರಿ ಸೌಲಭ್ಯಗಳನ್ನು ನೀಡಲಾಗುತ್ತಿದೆ.

ದೇಶದ ಸಾರಿಗೆ ನಿಗಮಗಳಲ್ಲಿ ಮೊದಲ ಬಾರಿಗೆ ರೂ.1.20 ಕೋಟಿಗಳ ಅಪಘಾತ ವಿಮೆ ಸಾರಿಗೆ ನೌಕರರಿಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಜಾರಿಗೆ ತರಲಾಗಿದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ