Breaking News

ಬಳ್ಳಾರಿಯ ಜಿಂದಾಲ್ ಕಾರ್ಖಾನೆಯ ಇಬ್ಬರು ಉದ್ಯೋಗಿಗಳಿಗೆ ಕೋವಿಡ್ ದೃಢ

Spread the love

ಳ್ಳಾರಿ: ಜಿಲ್ಲೆಯಲ್ಲಿರುವಂತ ಜಿಂದಾಲ್ ಉಕ್ಕಿನ ಕಾರ್ಖಾನೆಯಲ್ಲಿನ ಇಬ್ಬರು ಉದ್ಯೋಗಿಗಳಿಗೆ ಕೋವಿಡ್ ದೃಢಪಟ್ಟಿದೆ. ಹೀಗಾಗಿ ಕಾರ್ಖಾನೆಯ ಇತರೆ ಸಿಬ್ಬಂದಿಗಳಿಗೆ ಕೊರೋನಾ ಸೋಂಕಿನ ಭೀತಿ ಎದುರಾಗಿದೆ.

ಬಳ್ಳಾರಿ ತಾಲೂಕಿನ ತೋರಣಗಲ್ ನಲ್ಲಿರುವಂತ ಜಿಂದಾಲ್ ಕಾರ್ಖಾನೆಯಲ್ಲಿನ ಇಬ್ಬರು ಉದ್ಯೋಗಿಗಳಿಗೆ ಕೋವಿಡ್ ಪಾಸಿಟಿವ್ ಎಂಬುದಾಗಿ ವರದಿಯಿಂದ ದೃಢಪಟ್ಟಿದೆ.

ಅವರನ್ನು ಹೋಂ ಕ್ವಾರಂಟೈನ್ ಮಾಡಿ, ಚಿಕಿತ್ಸೆ ನೀಡಲಾಗುತ್ತಿದೆ.

ಜಿಂದಾಲ್ ಕಾರ್ಖಾನೆಯಲ್ಲಿ 35 ಸಾವಿರ ಉದ್ಯೋಗಿಗಳಿದ್ದಾರೆ. ಇವರಲ್ಲಿ ಕೋವಿಡ್ ಸೋಂಕಿತರ ಸಂಪರ್ಕಿತರನ್ನು ಆರೋಗ್ಯ ಇಲಾಖೆಯಿಂದ ಕೊರೋನಾ ಪರೀಕ್ಷೆ ಮಾಡೋದಕ್ಕೆ ಮುಂದಾಗಿದೆ.

ಈಗ ಕೋವಿಡ್ ದೃಢಪಟ್ಟಿರುವಂತ ಜಿಂದಾಲ್ ಉಕ್ಕು ಕಾರ್ಖಾನೆಯ ಇಬ್ಬರು ಉದ್ಯೋಯಿಗಳಿಗೆ ಯಾವುದೇ ಹಿಸ್ಟರಿಯಿಲ್ಲ. ಆ ಬಗ್ಗೆಯೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಮಾಹಿತಿ ಕಲೆಹಾಕೋ ಕಾರ್ಯದಲ್ಲಿ ನಿರತರಾಗಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.


Spread the love

About Laxminews 24x7

Check Also

ಪ್ರಾಥಮಿಕ ಶಾಲಾ ಶಿಕ್ಷಕರ ಬಡ್ತಿಗೆ 2:1ರ ಅನುಪಾತ: ಗೆಜೆಟ್ ಅಧಿಸೂಚನೆ ಪ್ರಕಟ

Spread the loveಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿಗೆ ರಾಜ್ಯ ಸರ್ಕಾರವು ನಿಯಮಗಳನ್ನು ರೂಪಿಸಿ ಗೆಜೆಟ್ ಅಧಿಸೂಚನೆ ಪ್ರಕಟಿಸಿದೆ. ಅದರಂತೆ, ಪ್ರಾಥಮಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ