Breaking News

ಮೋಹನ್ ಕುಮಾರ್‌ ದಾನಪ್ಪರ ಸಮಾಜಮುಖಿ ಕಾರ್ಯ ಶ್ಲಾಘನೀಯ: ಸಚಿವ ರಹೀಂ ಖಾನ್

Spread the love

ಬಳ್ಳಾರಿ: ದೇಶದ ಯುವಕರು ಸೇನೆ (Army) ಸೇರುವಂತೆ ಜಾಗೃತಿಗಾಗಿ ಕೇಂದ್ರಾಡಳಿತ ಪ್ರದೇಶ ಲಡಾಖ್‌ನ ಕಾರ್ಗಿಲ್‌ನಲ್ಲಿ (Kargil) ಮ್ಯಾರಥಾನ್ (Marathon) ಮಾಡಿದ ಬಳ್ಳಾರಿ ಜಿಲ್ಲೆಯ ಕಂಪ್ಲಿಯ ನಿವಾಸಿ, ಕರ್ನಾಟಕ ಉಚ್ಚ ನ್ಯಾಯಾಲಯದ ಕೇಂದ್ರ ಸರ್ಕಾರಿ ವಕೀಲ ಮೋಹನ್ ಕುಮಾರ್ ದಾನಪ್ಪ ಅವರಿಗೆ ರಾಜ್ಯದ ಪೌರಾಡಳಿತ ಮತ್ತು ಹಜ್ ಇಲಾಖೆಯ ಸಚಿವ ರಹೀಂ ಖಾನ್ ಅವರು ಪತ್ರದ ಮುಖಾಂತರ ಅಭಿನಂದಿಸಿದ್ದಾರೆ.

 

ಕಲ್ಯಾಣ ಕರ್ನಾಟಕ ಭಾಗದ ಬಳ್ಳಾರಿ ಜಿಲ್ಲೆಯ ಕಂಪ್ಲಿ ನಗರ ನಿವಾಸಿ ಕರ್ನಾಟಕ ಉಚ್ಚ ನ್ಯಾಯಾಲಯದ ಕೇಂದ್ರ ಸರ್ಕಾರಿ ವಕೀಲರಾಗಿ ಕಾರ್ಯನಿರ್ವಹಿಸುತ್ತಿರುವ ಮೋಹನ್ ಕುಮಾರ್ ದಾನಪ್ಪ ಅವರು 77 ನೇ ಸ್ವಾತಂತ್ರ್ಯ ದಿನಾಚರಣೆ ಮತ್ತು 24ನೇ ಕಾರ್ಗಿಲ್‌ ವಿಜಯ ದಿವಸ ಅಂಗವಾಗಿ ಆಗಸ್ಟ್ 15, 2023 ರಂದು ಕೇಂದ್ರಾಡಳಿತ ಪ್ರದೇಶ ಲಡಾಖ್ ನ ಕಾರ್ಗಿಲ್ ನಗರದಲ್ಲಿ “ಸಲಾಂ ಸೋಲ್ಜರ್ಸ್” ಶೀರ್ಷಿಕೆಯಡಿಯಲ್ಲಿ ” ಯುವಕರೇ ದೇಶ ಸೇವೆಗೆ ಒಂದಾಗಿ, ಸೇನೆ ಸೇರಲು ಮುಂದಾಗಿ” ಎನ್ನುವ ವಾಕ್ಯದಡಿಯಲ್ಲಿ ಯುವಕರು ದೇಶ ಸೇವೆಗೆ ಸೇರುವ ಬಗ್ಗೆ ಜಾಗೃತಿಗಾಗಿ ಕಾರ್ಗಿಲ್ ನಗರದಿಂದ ಕಾರ್ಗಿಲ್‌ ಯುದ್ಧ ಸ್ಮಾರಕದವರೆಗೆ ಬಲಗೈನಲ್ಲಿ ರಾಷ್ಟ್ರಧ್ವಜ ಹಿಡಿದು ನಿರಂತರ 5 ಗಂಟೆಗಳ ಕಾಲ, ಆಮ್ಲಜನಕ ಕಡಿಮೆಯಿರುವ ಮತ್ತು ಸಮುದ್ರ ಮಟ್ಟಕ್ಕಿಂತ 10.800 ಅಡಿ ಮೇಲಿರುವ ಪ್ರದೇಶದಲ್ಲಿ 42 ಕಿಲೋ ಮೀಟರ್‌ ಓಡುವ ಮೂಲಕ ಅಸಾಧಾರಣ ಸಾಧನೆ ಮಾಡಿರುವ ತಮಗೆ ಅಭಿನಂದಿಸಲಾಗಿದೆ ಎಂದು ಸಚಿವ ರಹೀಂ ಖಾನ್ ಅವರ ಪತ್ರದಲ್ಲಿ ತಿಳಿಸಲಾಗಿದೆ.


Spread the love

About Laxminews 24x7

Check Also

ಕುರಿ ಕಾಯುವವನ ಮಗನ ಯುಪಿಎಸ್ಸಿ ಸಾಧನೆ

Spread the loveಬೆಳಗಾವಿ: ತಂದೆ ಕುರಿ ಕಾಯುತ್ತಾರೆ. ತಾಯಿ ಹೊಲದಲ್ಲಿ ಕೆಲಸ ಮಾಡುತ್ತಾರೆ. ಮನೆಯಲ್ಲಿ ಬಡತನ. ಮಗನಿಗೆ ಮಾತ್ರ ಇಡೀ ದೇಶವೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ