ಮೈಸೂರು: ವಿರೋಧದ ನಡುವೆ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ ವಾಪಸ್ (Hijab Row) ಪಡೆಯಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಬಗ್ಗೆ ಕಾರ್ಯಕ್ರಮವೊಂದರಲ್ಲಿ ಸಿಎಂ ಸಿದ್ದರಾಮಯ್ಯ ಸುಳಿವು ನೀಡಿದ್ದಾರೆ. ಊಟ, ಉಡುಪು ಅವರವರ ಇಷ್ಟ. ಹೀಗಾಗಿ ಹಿಜಾಬ್ ನಿಷೇಧ ಆದೇಶ ವಾಪಸ್ ತೆಗೆದುಕೊಳ್ಳಲು ಹೇಳಿರುವುದಾಗಿ ಸಿಎಂ ತಿಳಿಸಿದ್ದಾರೆ.
ನಂಜನಗೂಡು ತಾಲೂಕಿನ ದೊಡ್ಡ ಕವಲಂದೆ ಪೊಲೀಸ್ ಠಾಣೆಯಲ್ಲಿ ಆಯೋಜಿಸಿದ್ದ ಕವಲಂದೆ, ಅಂತರಸಂತೆ, ಜಯಪುರ ಪೊಲೀಸ್ ಠಾಣೆಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಪ್ರಧಾನಿ ಮೋದಿ ಅವರ ಸಬ್ ಕಾ ಸಾಥ್-ಸಬ್ ಕಾ ವಿಕಾಸ್ ಎನ್ನುವುದು ಬೋಗಸ್. ಬಟ್ಟೆ, ಉಡುಪು, ಜಾತಿ, ಆಧಾರದ ಮೇಲೆ ಜನರನ್ನು ವಿಭಜಿಸುವ, ಸಮಾಜವನ್ನು ವಿಭಜಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ನಾನು ಅದಕ್ಕೆಲ್ಲ ಅವಕಾಶ ಕೊಡಲ್ಲ. ಹಿಜಾಬ್ ನಿಷೇಧವನ್ನು (Hijab ban to be withdrawn) ವಾಪಸ್ ಪಡೆಯಲು ಹೇಳಿದೀನಿ ಎಂದು ತಿಳಿಸಿದ್ದಾರೆ