Breaking News
Home / Uncategorized / ಕೆಮಿಕಲ್ ಫ್ಯಾಕ್ಟರಿಯಲ್ಲಿ ಸಂಭವಿಸಿದ ಅವಘಡದಲ್ಲಿ ಇನ್ನೂ ಬೆಂಕಿ ಸಂಪೂರ್ಣವಾಗಿ ನಂದಿಲ್ಲ.

ಕೆಮಿಕಲ್ ಫ್ಯಾಕ್ಟರಿಯಲ್ಲಿ ಸಂಭವಿಸಿದ ಅವಘಡದಲ್ಲಿ ಇನ್ನೂ ಬೆಂಕಿ ಸಂಪೂರ್ಣವಾಗಿ ನಂದಿಲ್ಲ.

Spread the love

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿರುವ ಹೊಸಗುಡ್ಡದಹಳ್ಳಿಯಲ್ಲಿರುವ ಕೆಮಿಕಲ್ ಫ್ಯಾಕ್ಟರಿಯಲ್ಲಿ ಸಂಭವಿಸಿದ ಅವಘಡದಲ್ಲಿ ಇನ್ನೂ ಬೆಂಕಿ ಸಂಪೂರ್ಣವಾಗಿ ನಂದಿಲ್ಲ. ಕಳೆದ 20 ಗಂಟೆಯಿಂದ ಬೆಂಕಿ ಧಗ ಧಗನೇ ಉರಿಯುತ್ತಿದೆ.

ಸ್ಥಳಕ್ಕೆ ನೂರಾರು ಅಗ್ನಿ ಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಕಾರ್ಯಾಚರಣೆ ನಡೆಯುತ್ತಿದೆ. ರಾತ್ರಿಯಿಡೀ ಬೆಂಕಿ ನಂದಿಸೋ ಕಾರ್ಯದಲ್ಲಿ ಸಿಬ್ಬಂದಿ ನಿರತರಾಗಿದ್ದರು. ಬೆಂಕಿ ಅವಘಡದಲ್ಲಿ 2 ರಿಂದ 3 ಕೋಟಿ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. 7 ವಾಹನಗಳು, 2 ವಿದ್ಯುತ್ ಕಂಬ ನಾಶವಾಗಿವೆ. ಘಟನೆ ಸಂಬಂಧ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಜಾಯ್ ಪಾಷ ಎಂಬವರ ದೂರಿನ ಮೇಲೆ ಈ ಕೇಸ್ ದಾಖಲಾಗಿದೆ.

ನಿನ್ನೆ ಮಧ್ಯಾಹ್ನ ಕೆಮಿಕಲ್ ಫ್ಯಾಕ್ಟರಿಯಲ್ಲಿ ಬೃಹತ್ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಎಷ್ಟೇ ಪ್ರಯತ್ನಿಸಿದರೂ ಬೆಂಕಿ ನಿಯಂತ್ರಣಕ್ಕೆ ಬರುತ್ತಿರಲಿಲ್ಲ. ಬೃಹತ್ ಪ್ರಮಾಣದಲ್ಲಿ ವ್ಯಾಪಿಸಿರುವುದರಿಂದ ಅಕ್ಕ ಪಕ್ಕದ ಮನೆಗಳಿಗೆ ಬೆಂಕಿ ಹೊತ್ತಿಕೊಂಡಿತ್ತು. ಅಕ್ಕಪಕ್ಕದ ಮನೆಯವರನ್ನು ಸ್ಥಳಾಂತರಿಸಲು ಪೊಲೀಸರು ಮತ್ತು ಅಗ್ನಿ ಶಾಮಕ ಸಿಬ್ಬಂದಿ ಹರಸಾಹಸಪಟ್ಟಿದ್ದರು. ಇಡೀ ರಸ್ತೆಯಲ್ಲಿ ಎಲ್ಲಿ ನೋಡಿದರೂ ಬೆಂಕಿಮಯವಾಗಿದ್ದು, ಸಂಪೂರ್ಣ ಹೊಗೆ ಆವರಿಸಿಕೊಂಡಿತ್ತು. ಫ್ಯಾಕ್ಟರಿ ಅಕ್ಕ-ಪಕ್ಕ ನಿಲ್ಲಿಸಿದ್ದ ವಾಹನಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದ್ದವು.


Spread the love

About Laxminews 24x7

Check Also

ಬರಪೀಡಿತ ಪ್ರದೇಶ ಘೋಷಣೆಗೆ ಮನವಿ’

Spread the love ಮೂಡಲಗಿ: ಮೂಡಲಗಿ ತಾಲ್ಲೂಕಿನ ಹೊಸಯರಗುದ್ರಿ ಗ್ರಾಮವನ್ನು ‘ಬರಪೀಡಿತ ಪ್ರದೇಶ’ ಎಂದು ಸರ್ಕಾರವು ಘೋಷಿಸಬೇಕು ಎಂದು ರೈತರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ