Breaking News
Home / ನವದೆಹಲಿ / ಪ್ರಜಾಪ್ರಭುತ್ವ ಉಳಿವಿಗೆ ದೇಶದ ಜನ ಒಂದಾಗಿ: ಮಲ್ಲಿಕಾರ್ಜುನ ಖರ್ಗೆ

ಪ್ರಜಾಪ್ರಭುತ್ವ ಉಳಿವಿಗೆ ದೇಶದ ಜನ ಒಂದಾಗಿ: ಮಲ್ಲಿಕಾರ್ಜುನ ಖರ್ಗೆ

Spread the love

ವದೆಹಲಿ: ಚಳಿಗಾಲದ ಅಧಿವೇಶನದ ವೇಳೆ ಸಂಸತ್ತಿನ ಉಭಯ ಸದನಗಳಿಂದ 146 ಸಂಸದರನ್ನು ಅಮಾನತುಗೊಳಿಸಲಾಗಿದೆ. ಇದು ಕೇಂದ್ರ ಬಿಜೆಪಿ (BJP) ಸರ್ಕಾರದ ಸರ್ವಾಧಿಕಾರ. ಈ ಹಿನ್ನೆಲೆ ದೇಶದಲ್ಲಿ ಪ್ರಜಾಪ್ರಭುತ್ವವನ್ನು ಉಳಿಸಲು ಜನರು ಒಂದಾಗಬೇಕು ಎಂದು ಕಾಂಗ್ರೆಸ್ (Congress) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಕರೆ ನೀಡಿದ್ದಾರೆ.

 

ಚಳಿಗಾಲದ ಅಧಿವೇಶನದ ವೇಳೆ ಸಂಸತ್ತಿನ ಉಭಯ ಸದನಗಳಿಂದ 146 ಸಂಸದರನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ಪ್ರತಿಪಕ್ಷ ಇಂಡಿಯಾ ಬಣ (INDIA bloc) ನವದೆಹಲಿಯ ಜಂತರ್ ಮಂತರ್‌ನಲ್ಲಿ (Jantar Mantar) ಪ್ರತಿಭಟನೆ ನಡೆಸಿದ್ದು, ದೇಶದಲ್ಲಿ ಪ್ರಜಾಪ್ರಭುತ್ವವನ್ನು ಉಳಿಸಲು ಜನರು ಒಂದಾಗಬೇಕು ಎಂದು ಖರ್ಗೆ ಕರೆ ನೀಡಿದ್ದಾರೆ. ಅಲ್ಲದೆ, ಉಪರಾಷ್ಟ್ರಪತಿ ಹಾಗೂ ಸಭಾಧ್ಯಕ್ಷರಾಗಿರುವ ಧನ್ ಕರ್ (Jagadeep dhankar), ನೀವು ಸಾಂವಿಧಾನಿಕ ಹುದ್ದೆಯಲ್ಲಿದ್ದೀರಿ. ನೀವು ಅದನ್ನು ಎತ್ತಿಹಿಡಿಯಬೇಕು. ಜಾತಿಯ ಬಗ್ಗೆ ಕೆಣಕಬಾರದು. ನನ್ನ ಜಾತಿಯಿಂಗಾಗಿ ನನ್ನನ್ನು ಗುರಿಯಾಗಿಸಲಾಗಿದೆ ಎಂದು ಹೇಳಬಾರದು ಎಂದು ಕಿಡಿಕಾರಿದ್ದಾರೆ.


Spread the love

About Laxminews 24x7

Check Also

ಲಿಂಗ ವಿವಾಹ.. ಇಂದು ಸುಪ್ರೀಂ ಕೋರ್ಟ್​ನಿಂದ ಮಹತ್ವದ ತೀರ್ಪು

Spread the love ನವದೆಹಲಿ: ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ಕೋರಿ ಸಲ್ಲಿಸಿರುವ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ಕಾಯ್ದಿರಿಸಿರುವ ತನ್ನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ