ಬೆಳಗಾವಿ, ಅಪರಿಚಿತನೋರ್ವ ಕರ್ನಾಟಕ-ಮಹಾರಾಷ್ಟ್ರ ಸಾರಿಗೆ ಬಸ್‌ಗಳ (bus) ಮೇಲೆ ಕಲ್ಲೆಸಿದ್ದು, ಓರ್ವ ಪ್ರಯಾಣಿಕನಿಗೆ ಗಾಯವಾಗಿದೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆನಕನಹೊಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಬೆಳಗಾವಿ ಎಸ್‌ಪಿ ಭೀಮಾಶಂಕರ ಗುಳೇದ್ ದೌಡಾಯಿಸಿ ಪರಿಶೀಲನೆ ಮಾಡಿದರು.
ಬೆನಕನಹೊಳಿ ಗ್ರಾದ ಬಳಿ ಕೆಎ-42, F-962 ಸಂಖ್ಯೆಯ NWKRTC ಹುಕ್ಕೇರಿ – ಬೆಳಗಾವಿ ತಡೆರಹಿತ ಬಸ್ ಮೇಲೆ ಕಲ್ಲೆಸಿದಿದ್ದು, ಬಸ್‌ನಲ್ಲಿದ್ದ ಪ್ರಯಾಣಿಕ ರಮೇಶ್ ಚಿವಟೆ(55) ಎಂಬುವರಿಗೆ ಗಾಯವಾಗಿದೆ. ಇನ್ನು ಸ್ಥಳಕ್ಕೆ ಎಸ್‌ಪಿ ಭೀಮಾಶಂಕರ ಗುಳೇದ್ ಆಗಮಿಸಿದ್ದುಮ ಪರಿಶೀಲನೆ ನಡೆಸಿದ್ದಾರೆ. ಕರ್ನಾಟಕ ಸಾರಿಗೆ ಬಸ್ ಜೊತೆ ಮಹಾರಾಷ್ಟ್ರ ಸಾರಿಗೆ ಸಂಸ್ಥೆಗೆ ಸೇರಿದ ಬಸ್‌ಗಳ ಮೇಲೂ ಕಲ್ಲೆಸೆದಿದ್ದಾನೆ ಎಂದು ತಿಳಿದುಬಂದಿದ್ದು, ಕಲ್ಲೆಸಿದವನು ಯಾರು? ಏಕೆ ಕಲ್ಲೆಸಿದ್ದಾನೆ ಎನ್ನುವ ಮಾಹಿತಿ ತಿಳಿದುಬರಬೇಕಿದೆ.