Breaking News

KPTCL ದೀರ್ಘಕಾಲಿಕ ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆ: ಇಂಧನ ಸಚಿವ ಕೆ.ಜೆ.ಜಾರ್ಜ್

Spread the love

ರ್ನಾಟಕ ವಿದ್ಯುತ್ ಸರಬರಾಜು ನಿಗಮ (KARNATAKA POWER TRANSMISSION CORPORATION LIMITED)ನಲ್ಲಿ ದೀರ್ಘಕಾಲಿಕ ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಗಂಭೀರ ಪರಿಗಣನೆಯಲ್ಲಿ ತೊಡಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಬೆಂಗಳೂರು: ಕರ್ನಾಟಕ ವಿದ್ಯುತ್ ಸರಬರಾಜು ನಿಗಮ (KARNATAKA POWER TRANSMISSION CORPORATION LIMITED)ನಲ್ಲಿ ದೀರ್ಘಕಾಲಿಕ ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಗಂಭೀರ ಪರಿಗಣನೆಯಲ್ಲಿ ತೊಡಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.
ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಟಿಸಿಎಲ್ ಮತ್ತು ವಿದ್ಯುತ್ ಸರಬರಾಜು ಕಂಪನಿಗಳು -ಎಸ್ಕಾಂ (Electricity Supply Companies)ಗಳ ತಾಂತ್ರಿಕ ವಿಭಾಗದಲ್ಲಿ 15-20 ವರ್ಷದಿಂದ ಕೆಲಸ ಮಾಡುತ್ತಿರುವ ಹೊರಗುತ್ತಿಗೆ ನೌಕರರನ್ನು ಒಳಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಂಡು ಸೇವಾ ಭದ್ರತೆ ಒದಗಿಸುವ ವಿಷಯವನ್ನು ಸರಕಾರ ಗಂಭೀರವಾಗಿ ಪರಿಗಣಿಸಿದ್ದು, ಈ ನಿಟ್ಟಿನಲ್ಲಿ ಕಾನೂನಿನ ಅವಕಾಶಗಳನ್ನು ಪರಿಶೀಲಿಸಲಾಗುತ್ತಿದೆ. ಕೆಪಿಟಿಸಿಎಲ್ ಮತ್ತು ಎಸ್ಕಾಂಗಳಲ್ಲಿ ಸ್ಟೇಷನ್ ಆಪರೇಟರ್ ಗಳು, ಸ್ಟೇಷನ್ ಸಹಾಯಕರು, ಗ್ಯಾಂಗ್ ಮೆನ್ ಮತ್ತು ಮೀಟರ್ ರೀಡರ್ ಹುದ್ದೆಗಳಲ್ಲಿ ಸಾಕಷ್ಟು ಮಂದಿ 15-20 ವರ್ಷಗಳಿಗಿಂತ ಹೆಚ್ಚು ಅವಧಿಯಿಂದ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಸೇವಾ ಭದ್ರತೆ ಒದಗಿಸಿ ಒಳಗುತ್ತಿಗೆ ವ್ಯಾಪ್ತಿಗೆ ತರಲು ಸರ್ಕಾರ ಯೋಚಿಸಿದೆ ಎಂದು ತಿಳಿಸಿದರು.

Spread the love

About Laxminews 24x7

Check Also

ಸಾರ್ವಜನಿಕರಿಗೆ ಸಮಸ್ಯೆಯಾಗದಂತೆ ಕಾಮಗಾರಿ ಕೈಗೊಳ್ಳಿ :ಶಾಸಕ ರಾಜು ಶೆಠ್

Spread the love ಫ್ಲೈಓವರ್ ಕಾಮಗಾರಿಗೆ ಸಂಬಂಧಿಸಿದ ಪ್ರಮುಖ ಪ್ರದೇಶಗಳ ಪರಿಶೀಲನೆ ನಾಗರಿಕರ ಸುರಕ್ಷತೆ, ತುರ್ತು ಸೇವೆಗಳ ಪ್ರವೇಶ ಮಾರ್ಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ