ಬೆಂಗಳೂರು: ರಾಜ್ಯ ಬಿಜೆಪಿ (BJP) ಪದಾಧಿಕಾರಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ (DV Sadananda Gowda) ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಜ್ಯ ಬಿಜೆಪಿಯಲ್ಲಿ ಅಸಮಾಧಾನಗೊಂಡ ನಾಯಕರ ಪಟ್ಟಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ.
ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ವಿಪಕ್ಷ ಸ್ಥಾನಕ್ಕೆ ಬಿ.ವೈ.ವಿಜಯೇಂದ್ರ (BY Vijayendra) ಹಾಗೂ ಆರ್. ಅಶೋಕ್ (R. Ashok) ಆಯ್ಕೆಯಾದಗಿನಿಂದ ಬಿಜೆಪಿ ಹಿರಿಯ ನಾಯಕರು ಒಬ್ಬರಾದ ಮೇಲೊಬ್ಬರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಇದೀಗ ಹಿರಿಯ ಬಿಜೆಪಿ ನಾಯಕ ಡಿ.ವಿ. ಸದಾನಂದ ಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಜ್ಯ ಬಿಜೆಪಿ ಅದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಸದಾನಂದ ಗೌಡ, ಕೇಂದ್ರದ ನಾಯಕರು ಪಕ್ಷದ ಹಿರಿಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ. ಹಿರಿಯ ನಾಯಕರನ್ನು ಕಡೆಗಣಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ಈಗಾಗಲೇ ಸ್ವಪಕ್ಷದ ವಿರುದ್ಧ ವಿ.ಸೋಮಣ್ಣ (V.Somanna), ಎಸ್.ಟಿ.ಸೋಮಶೇಖರ್ (ST SomaShekar), ಬಸನಗೌಡ ಪಾಟೀಲ್ ಯತ್ನಾಳ್ (Basanagouda Partil Yathnal) ಈಗಲೂ ಅಸಮಾಧಾನ ಗೊಂಡಿದ್ದು, ಬಹಿರಂಗವಾಗಿಯೇ ತಮ್ಮ ಸಿಟ್ಟನ್ನು ವ್ಯಕ್ತಪಡಿಸುತ್ತಿದ್ದಾರೆ. ಯತ್ನಾಳ್ ಅಂತೂ ಅವಕಾಶ ಸಿಕ್ಕಾಗಲೆಲ್ಲ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa) ಹಾಗೂ ಬಿ.ವೈ. ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸುತ್ತಲೇ ಇದ್ದಾರೆ.