ರಾಜ್ಯ ಬಿಜೆಪಿ ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕ ಮಾಡಲಾಗಿದೆ. ರಾಜ್ಯ ಉಪಾಧ್ಯಕ್ಷರು, ರಾಜ್ಯ ಪ್ರಧಾನ ಕಾರ್ಯದರ್ಶಿಗಳು, ರಾಜ್ಯ ಕಾರ್ಯದರ್ಶಿಗಳು, ಖಜಾಂಚಿ ಮತ್ತು 7 ಮೋರ್ಛಾಗಳ ಅಧ್ಯಕ್ಷರ ನೇಮಕ ಮಾಡಲಾಗಿದೆ. ಪಟ್ಟಿಯಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ 6 ಆಪ್ತರಿಗೆ ಸ್ಥಾನ ನೀಡಲಾಗಿದೆ.
ಹೀಗಾಗಿ ಇದಕ್ಕೆ ಅಪಸ್ವರಗಳು ವ್ಯಕ್ತವಾಗಿದ್ದು, ಈ ಬಗ್ಗೆ ಸದಾನಂದಗೌಡ ಹೈಕಮಾಂಡ್ಗೆ ಕೆಲ ಸಲಹೆ ಸೂಚನೆಗಳನ್ನು ನೀಡಿದ್ದಾರೆ.
ಬೆಂಗಳೂರು, (ಡಿಸೆಂಬರ್ 24): ಬಿವೈ ವಿಜಯೇಂದ್ರ (BY Vijayendra) ಅವರು ರಾಜ್ಯಾಧ್ಯಕ್ಷರಾಗುತ್ತಿದ್ದಂತೆಯೇ ರಾಜ್ಯ ಬಿಜೆಪಿ(BJP) ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕ ಮಾಡಲಾಗಿದೆ. ಆದ್ರೆ, ಪಟ್ಟಿಯಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ (BS Yediyurappa) 6 ಆಪ್ತರಿಗೆ ಸ್ಥಾನ ನೀಡಲಾಗಿದ್ದು, ಇದು ಇತರೆ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ ಬಿಜೆಪಿ ಸಂಸದ ಸದಾನಂದಗೌಡ ಪ್ರತಿಕ್ರಿಯಿಸಿ, ಈ ತಂಡವನ್ನು ಅಸಮರ್ಥ ತಂಡ ಅಂತಾ ಹೇಳಲ್ಲ. ಆದರೆ ಅಲ್ಲೋ ಇಲ್ಲೋ ಸ್ವಲ್ಪ ವ್ಯತ್ಯಾಸಗಳು ಇವೆ. ಇದನ್ನೆಲ್ಲ ಮಾಡುವ ಮುನ್ನ ಕೇಂದ್ರದ ನಾಯಕರು ಬಂದು ರಾಜ್ಯದ ಹಿರಿಯರ ಜೊತೆ ಕುಳಿತು ತಿಳಿದುಕೊಳ್ಳಬೇಕಿತ್ತು ಎಂದು ಅಸಮಾಧಾನ ಹೊರಹಾಕಿದ್ದಾರೆ.
ಈ ತಂಡ ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋದರೆ ಖಂಡಿತ ಯಶಸ್ವಿಯಾಗುತ್ತದೆ. ಮತ್ತೆ ಏನಾದರೂ ಹಳೆಯ ಚಾಳಿ ಮುಂದುವರಿಸಿದರೆ ಅದು ಪಕ್ಷದ ಮೇಲೆ ಸಮಸ್ಯೆ ಆಗುತ್ತದೆ. ದಕ್ಷಿಣ ಭಾಗಕ್ಕೆ ಹೆಚ್ಚು ಆದ್ಯತೆ ಸಿಕ್ಕಿದೆ, ಉತ್ತರ ಭಾಗಕ್ಕೆ ಸರಿಯಾಗಿ ಸಿಕ್ಕಿಲ್ಲ ಎಂಬ ಮಾತುಗಳು ಇವೆ. ಈ ತಂಡವನ್ನು ಅಸಮರ್ಥ ತಂಡ ಅಂತಾ ಹೇಳಲ್ಲ. ಆದರೆ ಅಲ್ಲೋ ಇಲ್ಲೋ ಸ್ವಲ್ಪ ವ್ಯತ್ಯಾಸಗಳು ಇವೆ. ಇದನ್ನೆಲ್ಲ ಮಾಡುವ ಮುನ್ನ ಕೇಂದ್ರದ ನಾಯಕರು ಬಂದು ರಾಜ್ಯದ ಹಿರಿಯರ ಜೊತೆ ಕುಳಿತು ತಿಳಿದುಕೊಳ್ಳಬೇಕಿತ್ತು. ಅವರಿಂದ ಹೊಸ ವಿಷಯ ತೆಗೆದುಕೊಂಡು ತಂಡವನ್ನು ಮಾಡಬೇಕಿತ್ತು ಎಂದಿದ್ದಾರೆ.