Breaking News

ಕ್ರಿಸ್​​ಮಸ್​ ಹಬ್ಬ ಆಚರಣೆ ನಗರದ ಎಲ್ಲಾ ಚರ್ಚ್​ಗಳಲ್ಲಿ ಕ್ರೈಸ್ತ ಬಾಂಧವರ ವಿಶೇಷ ಪ್ರಾರ್ಥನೆ

Spread the love

ಕ್ರಿಸ್​​ಮಸ್​ ಹಬ್ಬ ಆಚರಣೆ ಹಿನ್ನೆಯಲ್ಲಿ ಬೆಂಗಳೂರಿನ ಶಿವಾಜಿನಗರದ ಸೇಂಟ್ ಮೇರಿ ಬೆಸಿಲಿಕಾ ಚರ್ಚ್​​​ಗೆ 20 ಸಾವಿರಕ್ಕೂ ಹೆಚ್ಚು ಜನ ಆಗಮಿಸುವ ನಿರೀಕ್ಷೆ ಇದೆ. ಹೀಗಾಗಿ ಚರ್ಚೆಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ. ಚರ್ಚ್​ಗೆ ಬರುವ ಜನರನ್ನು ನಿಭಾಯಿಸಲು ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಬೆಂಗಳೂರು, ಡಿಸೆಂಬರ್​ 25:ಕ್ರಿಸ್​ಮಸ್ಹಬ್ಬ (Christmas festival) ಹಿನ್ನೆಲೆಯಲ್ಲಿ ನಗರದ ಚರ್ಚ್​​​ಗಳಿಗೆ ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿದೆ. ನಗರದ ಎಲ್ಲಾ ಚರ್ಚ್​ಗಳಲ್ಲಿ ಕ್ರೈಸ್ತ ಬಾಂಧವರು ವಿಶೇಷ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಚರ್ಚ ಸುತ್ತಮುತ್ತ ಪೊಲೀಸರು ಗಸ್ತು ತಿರುಗುವಂತೆ ಬೆಂಗಳೂರು (Bengaluru) ನಗರ ಆಯುಕ್ತರು ಸೂಚನೆ ನೀಡಿದ್ದಾರೆ. ಬೆಂಗಳೂರು ನಗರದಾದ್ಯಂತ ಪೊಲೀಸ್ ಭದ್ರತೆ ಮಾಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಚರ್ಚ್​ಗಳ ಬಳಿ ಕೆಎಸ್​ಆರ್​ಪಿ ತುಕಡಿಗಳನ್ನು ನಿಯೋಜಿಸಲಾಗಿದೆ.

ಶಿವಾಜಿನಗರದ ಸೇಂಟ್ ಮೇರಿ ಬೆಸಿಲಿಕಾ ಚರ್ಚ್​​​ಗೆ ಇಂದು 20 ಸಾವಿರಕ್ಕೂ ಹೆಚ್ಚು ಜನ ಆಗಮಿಸುವ ನಿರೀಕ್ಷೆ ಇದೆ. ಹೀಗಾಗಿ ಚರ್ಚೆಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ. ಚರ್ಚ್​ಗೆ ಬರುವ ಜನರನ್ನು ನಿಭಾಯಿಸಲು ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಟ್ರಾಫಿಕ್ ಸಮಸ್ಯೆ ನಿಯಂತ್ರಿಸಲು ಸಂಚಾರಿ ಪೊಲೀಸರನ್ನು ನಿಯೋಜಿಸಲಾಗಿದೆ.


Spread the love

About Laxminews 24x7

Check Also

ಹಾವೇರಿ: ಶರಣ ಚೌಡಯ್ಯ ಐಕ್ಯ ಮಂಟಪಕ್ಕೆ ಜಲದಿಗ್ಬಂಧನ, ತೆಪ್ಪದಲ್ಲಿ ತೆರಳಿ ಭಕ್ತರಿಂದ ಪೂಜೆ

Spread the loveಹಾವೇರಿ: ಸಂತರ, ಶರಣರ ಮತ್ತು ದಾರ್ಶನಿಕರ ಜಿಲ್ಲೆ ಹಾವೇರಿ. ಇಲ್ಲಿ ಸರ್ವಜ್ಞ, ಅಂಬಿಗರ ಚೌಡಯ್ಯ, ಕನಕದಾಸರು, ಶಿಶುನಾಳ ಶರೀಫರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ