ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಕೈಹಾಕಿ ಸಿಎಂ ಮತ್ತು ಎಂ.ಬಿ.ಪಾಟೀಲ್ ಕೈಸುಟ್ಟುಗೊಂಡಿದ್ದಾರೆ.
ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಯರಡೋಣಿ ಗ್ರಾಮದಲ್ಲಿ 2ಎ ಮೀಸಲಾತಿಗೆ ಆಗ್ರಹಿಸಿ ಸಮಾವೇಶದಲ್ಲಿ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಕೈಹಾಕಿ ಈ ಹಿಂದೆ ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಎಂ.ಬಿ.ಪಾಟೀಲ್ ಕೈಸುಟ್ಟುಗೊಂಡಿದ್ದಾರೆ.
ಮತ್ತೊಮ್ಮೆ ಅಂತಹ ಹುಚ್ಚು ಕೆಲಸವನ್ನು ಮಾಡೋದಕ್ಕೆ ಹೋಗಬಾರದು ಎಂದು ವಾಗ್ದಾಳಿ ಮಾಡಿದ್ದಾರೆ.
ರಾಯಚೂರು, ಡಿಸೆಂಬರ್ 24: ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಕೈಹಾಕಿ ಈ ಹಿಂದೆ ಸಿಎಂ ಸಿದ್ದರಾಮಯ್ಯ(Siddaramaiah)ಮತ್ತು ಸಚಿವ ಎಂ.ಬಿ.ಪಾಟೀಲ್ ಕೈಸುಟ್ಟುಗೊಂಡಿದ್ದಾರೆ. ಮತ್ತೊಮ್ಮೆ ಅಂತಹ ಹುಚ್ಚು ಕೆಲಸವನ್ನು ಮಾಡೋದಕ್ಕೆ ಹೋಗಬಾರದು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ಮಾಡಿದ್ದಾರೆ. ಜಿಲ್ಲೆಯ ಲಿಂಗಸುಗೂರು ತಾಲೂಕಿನ ಯರಡೋಣಿ ಗ್ರಾಮದಲ್ಲಿ 2ಎ ಮೀಸಲಾತಿಗೆ ಆಗ್ರಹಿಸಿ ಸಮಾವೇಶದಲ್ಲಿ ಮಾತನಾಡಿದ ಅವರು, ವೀರಶೈವ ಲಿಂಗಾಯತರನ್ನು ಕೂಡಿಸುವಂತಹ ಕೆಲಸ ಮಾಡಬೇಕು ಆದರೆ ಕೂಡಿಸುವಂತಹ ಕೆಲಸವನ್ನು ವೀರಶೈವ ಮಹಾಸಭಾ ಮಾಡಿಲ್ಲ ಎಂದಿದ್ದಾರೆ.