Breaking News

ನಿರ್ಮಾಣ ಹಂತದ ಕಟ್ಟಡ ಕುಸಿದು ಸಾವು

Spread the love

ಬೆಂಗಳೂರು, ಡಿ.25:ನಗರದ ಸುದ್ದಗುಂಟೆಪಾಳ್ಯ( Suddaguntepalya ) ದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ನಡೆದಿದೆ.

ಅವಶೇಷದಡಿಸಿಲುಕಿದ್ದ ಬಿಹಾರ ಮೂಲದ ಕಾರ್ಮಿಕ ರಂಜನ್ ಎಂಬಾತ ಕೊನೆಯುಸಿರೆಳೆದಿದ್ದಾನೆ. ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಮೃತ ದೇಹ ಹೊರ ತೆಗೆದಿದ್ದು, ಸೆಂಟ್ ಜಾನ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮತ್ತೊಬ್ಬ ಕಾರ್ಮಿಕನನ್ನು ರಕ್ಷಣೆ ಮಾಡಲಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕುರಿತು ಮಾತನಾಡಿದ ಆಗ್ನೇಯ ವಿಭಾಗದ ಡಿಸಿಪಿ ಸಿ.ಕೆ ಬಾಬ ‘ಮಧ್ಯಾಹ್ನ 2.30ರ ಸುಮಾರಿಗೆ ಈ ಘಟನೆ ನಡೆದಿದೆ. ಅಪಾರ್ಟ್ಮೆಂಟ್ ನಿರ್ಮಾಣ ಮಾಡಬೇಕು ಎಂದು ಜೆಸಿಬಿ ಮೂಲಕ ಅಡಿಪಾಯ ಅಗೆಯಲಾಗುತ್ತಿತ್ತು. ಜೆಸಿಬಿ ಜೊತೆಗೆ ಮೂರ್ನಾಲ್ಕು ಜನ ಕಾರ್ಮಿಕರನ್ನು ಕೆಲಸಕ್ಕೆ ಬಳಸಿಕೊಳ್ಳಲಾಗಿತ್ತು. ಈ ವೇಳೆ ಪಕ್ಕದಲ್ಲಿ ಮೂರು ಅಂತಸ್ಥಿನ ಬಿಲ್ಡಿಂಗ್ ಕಟ್ಟಡಕ್ಕೆ ಜೆಸಿಬಿ ತಾಗಿ ಘಟನೆ ನಡೆದಿದೆ. ಆ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರ ಮೇಲೆ ಬಿದ್ದಿದೆ. ಘಟನೆಯಲ್ಲಿ ಬಿಹಾರ ಮೂಲದ ಓರ್ವ ಸಾವನ್ನಪ್ಪಿದ್ದಾನೆ. ಈಗಾಗಲೇ ಮಾಲೀಕ ಯಾರು, ಕಾಂಟ್ರಾಕ್ಟರ್ ಯಾರು ಎನ್ನುವ ಮಾಹಿತಿ ಪಡೆಯಲಾಗುತ್ತಿದೆ. ಸಂಬಂಧಪಟ್ಟವರ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗುತ್ತೆ. ಬಿಬಿಎಂಪಿಯಿಂದ ಮಾಲೀಕರು ಎನೆಲ್ಲಾ ಪರ್ಮಿಷನ್ ತಗೊಂಡಿದ್ದಾರೆ ಎನ್ನುವ ಮಾಹಿತಿ ಪಡೆಯಲಾಗುತ್ತಿದೆ ಎಂದರು.


Spread the love

About Laxminews 24x7

Check Also

ಬೆಂಗಳೂರಲ್ಲಿ ಭೀಕರ ಅಪಘಾತ – ಇಬ್ಬರು ಸ್ಥಳದಲ್ಲೇ ಸಾವು

Spread the loveಬೆಂಗಳೂರು: ಇಲ್ಲಿನ ಗೊರಗುಂಟೆಪಾಳ್ಯದ ಟಿಎಂಟಿ ಜಂಕ್ಷನ್ ಬಳಿ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ