ರೈತರ ಬಗ್ಗೆ ಸಚಿವ ಶಿವಾನಂದ ಪಾಟೀಲ್ ಹೇಳಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮೌನಮುರಿದಿದ್ದಾರೆ. ಅನ್ನದಾತರಾದ ರೈತರ ಬಗ್ಗೆ ನಾವು ಎಚ್ಚರಿಕೆಯಿಂದ ಮಾತ್ರವಲ್ಲ ಗೌರವದಿಂದ ಮಾತನಾಡಬೇಕು. ಹಗುರ ಮಾತುಗಳ ಮೂಲಕ ರೈತರಿಗೆ ಅವಮಾನವಾಗುವಂತೆ ಮಾಡಬಾರದು ಎಂದು ಸಚಿವ ಶಿವಾನಂದ್ ಪಾಟೀಲ್ರ ಹೇಳಿಕೆಯನ್ನ ಸಮರ್ಥನೆ ದಾಟಿಯಲ್ಲಿ ಖಂಡಿಸಿದ್ದಾರೆ.
ಬೆಂಗಳೂರು, ಡಿಸೆಂಬರ್26: ಅನ್ನದಾತರಾದ ರೈತರ ಬಗ್ಗೆ ಎಚ್ಚರಿಕೆಯಿಂದ ಮಾತ್ರವಲ್ಲ, ಗೌರವದಿಂದ ಮಾತನಾಡಬೇಕು ಎಂದು ಸಿಎಂ ಸಿದ್ದರಾಮಯ್ಯ
ರೈತ ಕುಟುಂಬದಿಂದ ಬಂದಿರುವ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಅವರಿಗೆ ರೈತರನ್ನು ಅವಮಾನಿಸಬೇಕೆಂಬ ದುರುದ್ದೇಶ ಖಂಡಿತ ಇರಲಾರದು. ತನ್ನ ಜೊತೆಗಿದ್ದ ರೈತರೊಂದಿಗಿನ ಸಲಿಗೆಯಿಂದ ಕೆಲವು ಮಾತುಗಳನ್ನು ಆಡಿದ್ದಾರೆ. ಆದರೆ ಇದು ಸಮಸ್ತ ರೈತ ಸಮುದಾಯಕ್ಕೆ ಅನ್ವಯ ಮಾಡುವಾಗ ವಿಪರೀತ ಅರ್ಥಕ್ಕೆ ಕಾರಣವಾಗುತ್ತದೆ. ಇದು ಸಲ್ಲದು ಎಂದಿದ್ದಾರೆ.